Corona Updates : ಕರ್ನಾಟಕದಲ್ಲಿ 1187 ಕೊರೊನಾ ಪ್ರಕರಣ : ಬೆಂಗಳೂರು, ದ.ಕ. ಉಡುಪಿಯಲ್ಲಿ ಕೊರೊನಾರ್ಭಟ

ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಕೊರೊನಾ ವೈರಸ್‌ ಸೋಂಕು (Corona Updates) ಸ್ಪೋಟಗೊಂಡಿದೆ. ಸತತ ಎರಡು ದಿನಗಳ ಕಾಲ ರಾಜ್ಯದಲ್ಲಿ ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೊರೊನಾ (corona virus) ಆರ್ಭಟಿಸಿದೆ. ಇಂದು ಬೆಂಗಳೂರಲ್ಲಿ 923ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದರೆ, ರಾಜ್ಯದಲ್ಲಿ 1187 ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3009557 ಕ್ಕೆ ಏರಿಕೆ ಕಂಡಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕೊರೊನಾ ಆತಂಕ ಶುರುವಾಗಿದೆ. ನಿನ್ನೆ ಎಂಟುನೂರಕ್ಕೂ ಅಧಿಕ ಪ್ರಕರಣ ದಾಖಲಾಗಿದ್ರೆ, ಇಂದು ಕೂಡ 923 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಬೆಂಗಳೂರಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 8671ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ಇಂದು ಬೆಂಗಳೂರಲ್ಲಿ 3 ಮಂದಿ ಸಾವನ್ನಪ್ಪಿದ್ದು, 16,405 ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಆತಂಕ ಶುರುವಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದಲೂ ಇನ್ನೂರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 63 ಹೊಸ ಕೋವಿಡ್‌ ಪ್ರಕರಣ ಪತ್ತೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 231 ಕ್ಕೆ ಏರಿಕೆ ಕಂಡಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಇಂದೂ ಕೂಡ 54 ಪ್ರಕರಣ ದಾಖಲಾಗಿದೆ. ಈ ಮೂಲಕ ಸಕ್ರೀಯ ಪ್ರಕರಣಗಳ ಸಂಖ್ಯೆ 184ಕ್ಕೆ ಏರಿಕೆ ಕಂಡಿದೆ. ಉಳಿದಂತೆ ಮೈಸೂರು 20, ಧಾರವಾಡ 15, ಬೆಳಗಾವಿ 12, ತುಮಕೂರು 12, ಕೊಡಗು 12, ಮೈಸೂರು 10, ಬಳ್ಳಾರಿ 9, ಉತ್ತರ ಕನ್ನಡ 8, ಬೆಂಗಳೂರು ಗ್ರಾಮಾಂತರ 6, ಹಾಸನ 6. ಕೋಲಾರ 4, ರಾಮನಗರ 3, ಶಿವಮೊಗ್ಗ 2, ದಾವಣಗೆರೆ 2, ಚಾಮರಾಜನಗರ 2 ಪ್ರಕರಣ ದಾಖಲಾಗಿದೆ.

ಭಾರತದಲ್ಲಿ ಕೊರೊನಾ ಪ್ರಕರಣ ಹಠಾತ್‌ ಏರಿಕೆ : ಒಂದೇ ದಿನ 27,553 ಹೊಸ ಪ್ರಕರಣ ದಾಖಲು

ನವದೆಹಲಿ : ಭಾರತದಲ್ಲಿ ಓಮಿಕ್ರಾನ್ ಭಯ ಆವರಿಸುತ್ತಿದೆ. ದೇಶದಲ್ಲಿ ಇಂದು ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ದಿಢೀರ್‌ ಏರಿಕೆಯಾಗಿದೆ. ಒಂದೇ ದಿನದಲ್ಲಿ 27,553 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದೆ. ಇನ್ನೊಂದೆಡೆಯಲ್ಲಿ ಒಮಿಕ್ರಾನ್ ಸೋಂಕಿನ ಸಂಖ್ಯೆ 1,525 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಕೇಂದ್ರದ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಇದುವರೆಗೆ ದೇಶದಲ್ಲಿ ಒಟ್ಟು 1,525 ಮಂದಿ ಓಮಿಕ್ರಾನ್‌ ಸೋಂಕಿಗೆ ತುತ್ತಾಗಿದ್ದಾರೆ. ಇನ್ನು ಕೊರೊನಾ ರೋಗಿಗಳಲ್ಲಿ, 560 ಜನರು ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಒಂದೇ ದಿನ 284 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದದಾರೆ. ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹಠಾತ್‌ ಏರಿಕೆ ಕಂಡು ಬಂದಿದ್ದು, ಕೋವಿಡ್ -19 ಪ್ರಕರಣಗಳ ಸಂಖ್ಯೆಯನ್ನು 34,889,132 ಕ್ಕೆ ಏರಿಕೆಯಾಗಿದೆ. ಸದ್ಯದ ಮಾಹಿತಿಯ ಪ್ರಕಾರ ಸಕ್ರಿಯ ಕರೋನಾ ಪ್ರಕರಣಗಳು 1,22,801 ಕ್ಕೆ ಏರಿಕೆಯಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದವರ ಸಂಖ್ಯೆ 4,81,770 ಕ್ಕೆ ಏರಿಕೆಯಾಗಿದೆ. ಸಕ್ರಿಯ ಕರೋನಾ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.35% ರಷ್ಟಿದ್ದರೆ, ರಾಷ್ಟ್ರೀಯ ಕೋವಿಡ್ -19 ಚೇತರಿಕೆ ದರವು 98.27% ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ದೈನಂದಿನ ಸಕಾರಾತ್ಮಕತೆಯ ದರವು 2.55% ನಲ್ಲಿ ದಾಖಲಾಗಿದ್ದರೆ ವಾರದ ಧನಾತ್ಮಕ ದರವು 1.35% ನಲ್ಲಿ ದಾಖಲಾಗಿದೆ. ದೇಶದಲ್ಲಿ ಇಲ್ಲಿಯವರೆಗೆ ನೀಡಲಾದ ಕೋವಿಡ್ ಲಸಿಕೆ ಡೋಸ್‌ಗಳ ಸಂಚಿತ ಸಂಖ್ಯೆ 145 ಕೋಟಿ ಮೀರಿದೆ. ಇದರಲ್ಲಿ 84.54 ಕೋಟಿ ಜನರಿಗೆ ಮೊದಲ ಡೋಸ್ ನೀಡಲಾಗಿದ್ದು, 60.84 ಜನರಿಗೆ ಸಂಪೂರ್ಣ ಲಸಿಕೆ ಹಾಕಲಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. ನಾಳೆ, ಜನವರಿ 3 ರಂದು, ಭಾರತವು 15 ಮತ್ತು 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನವನ್ನು ಪ್ರಾರಂಭಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವರ್ಷದಲ್ಲಿ ಭಾರತವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕಾಗಿದೆ ಮತ್ತು ಕೋವಿಡ್ -19 ಸಾಂಕ್ರಾಮಿಕದಿಂದ ಉಂಟಾಗುವ ಸವಾಲುಗಳನ್ನು ಬೆಳವಣಿಗೆಯ ಪ್ರಕ್ರಿಯೆಯನ್ನು ಕುಂಠಿತಗೊಳಿಸಲು ಅನುಮತಿಸುವುದಿಲ್ಲ ಎಂದು ಹೇಳಿದರು. ದೇಶವು “ಸಂಪೂರ್ಣ ಎಚ್ಚರಿಕೆ ಮತ್ತು ಜಾಗರೂಕತೆಯಿಂದ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವುದನ್ನು ಮುಂದುವರಿಸುತ್ತದೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನೂ ಸಹ ನೋಡಿಕೊಳ್ಳುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ಕರ್ನಾಟಕಕ್ಕೆ ಲಾಕ್ ಡೌನ್ ಅನಿವಾರ್ಯ: ಸರ್ಕಾರಕ್ಕೆ ಮಹತ್ವದ ಸಲಹೆ ಕೊಟ್ಟ ತಾಂತ್ರಿಕ ಸಮಿತಿ

ಇದನ್ನೂ ಓದಿ : ಭಾರತದಲ್ಲಿ ಕೊರೊನಾ ಪ್ರಕರಣ ಹಠಾತ್‌ ಏರಿಕೆ : ಒಂದೇ ದಿನ 27,553 ಹೊಸ ಪ್ರಕರಣ ದಾಖಲು

(Corona Updates : 1187 corona virus cases in Karnataka)

Comments are closed.