Corona Updates : ದೇಶದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೊನಾ ಅಬ್ಬರ : ಒಂದೇ ದಿನ 44,658 ಮಂದಿಗೆ ಕೊರೊನಾ ಸೋಂಕು

ನವದೆಹಲಿ : ಭಾರತದಲ್ಲಿ ಇಷ್ಟು ದಿನ ಕೊರೊನಾ ಸೋಂಕು ಇಳಿಕೆ ಕಂಡಿತ್ತು. ಆದ್ರೀಗ ಕಳೆದ ಎರಡು ದಿನಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಒಂದೇ ದಿನ ರಾಜ್ಯದಲ್ಲಿ 44,658 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅದ್ರಲ್ಲೂ ಕೊರೊನಾ ನಿಯಂತ್ರಣದಲ್ಲಿ ಮಾದರಿಯಾಗಿದ್ದ ಕೇರಳ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 44,658 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 494 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ವರದಿ ನೀಡಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 3,26,03,188ಕ್ಕೆ ಏರಿಕೆ ಕಂಡಿದೆ. ಮಾತ್ರವಲ್ಲ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯಲ್ಲಿಯೂ ದಿನೇ ದಿನೇ ಏರಿಕೆ ಕಾಣುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಇನ್ನೂ ಮುಗಿದಿಲ್ಲ ಎರಡನೇ ಅಲೆ : ಕೇಂದ್ರ ಆರೋಗ್ಯ ಇಲಾಖೆ ಕೊಟ್ಟಿದೆ ಎಚ್ಚರಿಕೆ

ಮೊದಲ ಕೊರೊನಾ ಅಲೆಯ ಸಂದರ್ಭದಲ್ಲಿ ದೇಶಕ್ಕೆ ಮಾದರಿಯಾಗಿದ್ದ ಕೇರಳ ಇದೀಗ ಕೊರೊನಾ ಹಾಟ್‌ ಸ್ಪಾಟ್‌ ಆಗಿ ಮಾರ್ಪಟ್ಟಿದೆ. ದೇಶದಲ್ಲಿ ನಿತ್ಯವೂ ದಾಖಲಾಗುತ್ತಿರುವ ಕೊರೊನಾ ಸೋಂಕಿತ ಪ್ರಕರಣಗಳ ಪೈಕಿ ಶೇ.೭೫ರಷ್ಟು ಪ್ರಕರಣಗಳು ಕೇರಳದಲ್ಲಿಯೇ ದಾಖಲಾಗುತ್ತಿದೆ. ಹೀಗಾಗಿ ಕೇರಳದಲ್ಲಿ ಮೂರನೇ ಅಲೆ ಆರಂಭವಾಗಿರುವ ಭೀತಿ ಎದುರಾಗಿದೆ.

ಕೊರೊನಾ ಸೋಂಕು ದಾಖಲಾಗುತ್ತಿರುವ ರಾಜ್ಯಗಳ ಸಾಲಿನಲ್ಲಿ ಕೇರಳ ಮೊದಲ ಸ್ಥಾನದಲ್ಲಿದೆ. ಇದೀಗ ಕೇಂದ್ರ ಆರೋಗ್ಯ ಇಲಾಖೆ ಕೇರಳ ಮಾತ್ರವಲ್ಲದೇ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಪಾಂಡಿಚೇರಿ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸುವಂತೆ ಸೂಚನೆಯನ್ನು ನೀಡಿದೆ.

ಈ ರಾಜ್ಯಗಳಲ್ಲಿ ಜನರ ಓಡಾಟ ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳು ಆರಂಭಗೊಂಡಿರುವುದರಿಂದ ಅತ್ಯಂತ ಕಟ್ಟೆಚ್ಚರ ವಹಿಸುವುದು ಅಗತ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋವಿಡ್ ಲಸಿಕೆಯನ್ನು ಇಂದೂ ಹೆಚ್ಚಿನ ಜನರಿಗೆ ನೀಡಲಾಗುತ್ತಿದ್ದು, ಒಂದೇ ದಿನ 80 ಲಕ್ಷಕ್ಕೂ ಹೆಚ್ಚು ಜನರಿಗೆ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಅಂತರ್‌ ರಾಜ್ಯ ಪ್ರಯಾಣಕ್ಕೆ ಹೊಸ ಮಾರ್ಗಸೂಚಿ : ಇನ್ಮುಂದೆ ಅರ್‌ಟಿಪಿಸಿಆರ್‌ ಕಡ್ಡಾಯವಲ್ಲ !

Comments are closed.