ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿದ್ದು, ಸೋಂಕಿತರನ್ನು ಶೀಘ್ರದಲ್ಲಿಯೇ ಗುಣಮುಖರನ್ನಾಗಿಸುವ ನಿಟ್ಟಿನಲ್ಲಿ ಆಯುರ್ವೇದ ಔಷಧಗಳನ್ನು ರೋಗಿಗಳಿಗೆ ನೀಡುವ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಿದೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಹುತೇಕ ಶಾಸಕರು ಆಯುರ್ವೇದ ಔಷಧವನ್ನು ಕೊರೊನಾ ಸೋಂಕಿತರಿಗೆ ನೀಡುವ ಸಲಹೆಯನ್ನು ನೀಡಿದ್ದಾರೆ. ಅಲ್ಲದೇ ಕೇರಳ ರಾಜ್ಯದಲ್ಲಿ ಈಗಾಗಲೇ ಆಯುರ್ವೇದ ಔಷಧವನ್ನು ಬಳಕೆ ಮಾಡಲಾಗುತ್ತಿದ್ದು, ರೋಗಿಗಳು ಕೊರೊನಾ ಸೋಂಕಿನಿಂದ ಶೀಘ್ರದಲ್ಲಿಯೇ ಗುಣಮುಖರಾಗುತ್ತಿದ್ದಾರೆ.

ಈ ನಿಟ್ಟಿನಲ್ಲಿ ಚಿಂತನೆಯನ್ನು ನಡೆಸಲಾಗುತ್ತಿದ್ದು, ಇಂದು ಸಂಜೆಯ ಒಳಗೆ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿಯೂ ಅಶೋಕ್ ತಿಳಿಸಿದ್ದಾರೆ.