ಬೆಂಗಳೂರಿಗೆ ಮತ್ತೆ ಶಾಕ್ ಕೊಟ್ಟ ಮಹಾಮಾರಿ : 249 ಮಂದಿಗೆ ಸೋಂಕು, ಸಾವಿನ ಸಂಖ್ಯೆ 142ಕ್ಕೆ ಏರಿಕೆ

0

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೊನಾ ಇಂದೂ ಕೂಡ ಶಾಕ್ ಕೊಟ್ಟಿದೆ. ಬೆಂಗಳೂರಲ್ಲಿಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ಶತಕದ ಗಡಿದಾಟಿದೆ. ಇಂದು ಬೆಂಗಳೂರಲ್ಲಿ 126 ಮಂದಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಸಾವಿನ ಸಂಖ್ಯೆಯೂ ಏರಿಕೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆಯಾಗಿದೆ.

ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಸಿಲಿಕಾನ್ ಸಿಟಿಯ ಮಂದಿ ಬೆಚ್ಚಿಬಿದ್ದಿದ್ದಾರೆ. ಇಂದೂ ಕೂಡ ದಾಖಲೆಯ ಸಂಖ್ಯೆಯಲ್ಲಿಯೇ ಸೋಂಕು ಪತ್ತೆಯಾಗಿದೆ. ಬೆಂಗಳೂರಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1398ಕ್ಕೆ ಏರಿಕೆಯಾಗಿದ್ದು, ಅಗ್ರಸ್ಥಾನಕ್ಕೇರಿದೆ. ಅಲ್ಲದೇ ಬರೋಬ್ಬರಿ 919 ಮಂದಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 67 ಮಂದಿಯನ್ನ ಮಹಾಮಾರಿ ಕೊರೊನಾ ಬಲಿಪಡೆದಿದೆ.

ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿರುವ ಕಲಬುರಗಿ ಜಿಲ್ಲೆಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಇಂದೂ ಕೂಡ 27 ಮಂದಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1226ಕ್ಕೆ ಏರಿಕೆ ಕಂಡಿದೆ. ಸೋಂಕಿತರ ಸಂಖ್ಯೆಯಲ್ಲಿ ಮೂರನೇ ಸ್ಥಾನದಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಇಂದು 14 ಮಂದಿಗೆ ಸೋಂಕು ಕಾಣಿಸಿಕೊಂಡು ಸೋಂಕಿತರ ಸಂಖ್ಯೆ 1,077ಕ್ಕೆ ಏರಿಕೆಯನ್ನು ಕಂಡಿದೆ.

ಉಳಿದಂತೆ ವಿಜಯಪುರದಲ್ಲಿ 15, ದಕ್ಷಿಣ ಕನ್ನಡ 12, ದಾವಣಗೆರೆ 9, ಉತ್ತರ ಕನ್ನಡ 6, ಬಾಗಲಕೋಟೆ 6, ಬೀದರ್ 5, ಚಿಕ್ಕಮಗಳೂರು 5, ಧಾರವಾಡ 4, ಬೆಂಗಳೂರು ಗ್ರಾಮಾಂತರ 4, ರಾಮನಗರ 3, ಚಿತ್ರದುರ್ಗ 2, ಕೋಲಾರ 2, ತುಮಕೂರು 2, ಕೊಡಗು 2 ಹಾಗೂ ಯಾದಗಿರಿ, ಮೈಸೂರು, ಚಿಕ್ಕಬಳ್ಳಾಪುರ, ಗದಗ ಹಾಗೂ ಕೊಪ್ಪಳದಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಇದುವರೆಗೆ 9,399 ಮಂದಿಗೆ ಸೋಂಕು ದೃಢಪಟ್ಟಿದ್ದು, 5730 ಮಂದಿ ಈಗಾಗಲೇ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆದರೆ 3,523 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುವವರ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಇದುವರೆಗೆ 142 ಮಂದಿ ಸಾವನ್ನಪ್ಪಿದ್ದಾರೆ.

Leave A Reply

Your email address will not be published.