ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಇಂದು ಒಂದೇ ದಿನ ಬರೋಬ್ಬರಿ 5,030 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 80,863 ಏರಿಕೆಯಾಗಿದೆ. ರಾಜ್ಯದಲ್ಲಿಂದು 97 ಜನ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1616ಕ್ಕೆ ಏರಿಕೆಯಾಗಿದೆ.

ಬೆಂಗಳೂರಲ್ಲಿ 2,207, ರಾಯಚೂರು 258, ಕಲಬುರಗಿ 229, ದಕ್ಷಿಣ ಕನ್ನಡ 218, ಬೆಳಗಾವಿ 214, ಧಾರವಾಡ 183, ಬಳ್ಳಾರಿ 164, ಬೆಂಗಳೂರು ಗ್ರಾಮಾಂತರ 161, ಉಡುಪಿ 160, ಮೈಸೂರು 116, ಹಾಸನ 108, ದಾವಣಗೆರೆ 107, ಬಾಗಲಕೋಟೆ 106, ಬೀದರ್ 94, ಉತ್ತರ ಕನ್ನಡ 82, ಶಿವಮೊಗ್ಗ 82, ಗದಗ 72,ಚಿಕ್ಕಬಳ್ಳಾಪುರ 65, ಚಿಕ್ಕಮಗಳೂರು 62, ತುಮಕೂರು 56, ಯಾದಗಿರಿ 55, ಮಂಡ್ಯ 50, ಕೋಲಾರ 40, ಚಾಮರಾಜನಗರ 27, ರಾಮನಗರ 26, ಕೊಡಗು 22, ವಿಜಯಪುರ 20, ಕಾವೇರಿ 18, ಕೊಪ್ಪಳ 17 ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ 10 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಇದುವರೆಗೆ 29,310 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 49,931 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.