ಬೆಂಗಳೂರು : ರಾಜ್ಯದಲ್ಲಿಂದು ಕೂಡ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದೆ. ಕಳೆದ 7 ದಿನಗಳಿಂದಲೂ ರಾಜ್ಯದಲ್ಲಿ 5 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ದೃಢಪಡುತ್ತಿದ್ದು, ಇಂದೂ ಕೂಡ 5,503 ಮಂದಿಗೆ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1.12 ಲಕ್ಷ ಗಡಿ ದಾಟಿದೆ. ಇಂದು 92 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸೋಂಕಿನಿಂದ ಬಲಿಯಾದವರ ಸಂಖ್ಯೆ 2,147ಕ್ಕೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿಯಲ್ಲಿಯೂ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದ್ದು, ಇಂದು ಕೂಡ 2,270 ಮಂದಿಗೆ ಸೋಂಕು ದೃಢವಾಗಿದ್ದು, 30 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 51,091ಕ್ಕೆ ಏರಿಕೆ ಆಗಿದೆ.

ಬಳ್ಳಾರಿಯಲ್ಲಿ 338, ಕಲಬುರಗಿ 168, ಮೈಸೂರು 200, ಉಡುಪಿ 173, ಧಾರವಾಡ 175, ಬೆಳಗಾವಿ 279, ದಕ್ಷಿಣ ಕನ್ನಡ 208, ದಾವಣಗೆರೆ 225 ಮಂದಿಗೆ ಸೋಂಕು ಬಂದಿದೆ. ಒಟ್ಟು 5 ಜಿಲ್ಲೆಯಲ್ಲಿ 200ಕ್ಕಿಂತ ಹೆಚ್ಚಿನ ಜನರಲ್ಲಿ ಸೋಂಕು ಪತ್ತೆಯಾಗಿದೆ.
