ಕರುನಾಡಲ್ಲಿ ಕೊರೊನಾ ಅಟ್ಟಹಾಸ : 3.5 ಲಕ್ಷಕ್ಕೇರಿದ ಕೊರೊನಾ ಸೋಂಕಿತರು

0

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 9058 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,51,481ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರವೊಂದರಲ್ಲೆ ಬರೋಬ್ಬರಿ 2967 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಒಟ್ಟು 9,058 ಮಂದಿಗೆ ಕೊರೊನಾ ಸೋಂಕು ಒಂದೇ ದಿನ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,51481 ಕ್ಕೆ ಏರಿಕೆಯನ್ನು ಕಂಡಿದೆ. ಆದರೆ ಈ ಪೈಕಿ 2,54,626 ಮಂದಿ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೇವಲ ಕೊರೊನಾ ಸೋಂಕಿತರ ಸಂಖ್ಯೆ ಮಾತ್ರವಲ್ಲ ಕೊರೊನಾ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಮಂಗಳವಾರ 135 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,837ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 40 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 135 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Leave A Reply

Your email address will not be published.