ಬ್ರಹ್ಮಾವರ : ಕೊರೊನಾ ವೈರಸ್ ಸೋಂಕು ಇದೀಗ ಬ್ರಹ್ಮಾವರಕ್ಕೂ ವ್ಯಾಪಿಸಿದೆ. ಬ್ರಹ್ಮಾವರ ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಬ್ರಹ್ಮಾವರ ಠಾಣೆಯನ್ನು ಸೀಲ್ ಡೌನ್ ಮಾಡುವ ಸಾಧ್ಯತೆಯಿದೆ.

ಬೆಳಗ್ಗೆಯಷ್ಟೇ ಕಾರ್ಕಳ ಹಾಗೂ ಅಜೆಕಾರು ಠಾಣೆಯ ಪೊಲೀಸರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದೀಗ ಬ್ರಹ್ಮಾವರ ಪೊಲೀಸ್ ಕಾನ್ ಸ್ಟೇಬಲ್ ಗೂ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದ್ದು, ಠಾಣೆಯನ್ನು ಸೀಲ್ ಡೌನ್ ಮಾಡಲಾಗುತ್ತದೆ.

ಇನ್ನು ಪೊಲೀಸ್ ಕಾನ್ ಸ್ಟೇಬಲ್ ಸಾಸ್ತಾನದ ಟೋಲ್ ಪ್ಲಾಝಾದಲ್ಲಿಯೂ ತಪಾಸಣಾ ಕಾರ್ಯವನ್ನು ನಡೆಸಿದ್ದರು ಎನ್ನಲಾಗುತ್ತಿದ್ದು, ಅಲ್ಲದೇ ಪೊಲೀಸ್ ಪೇದೆಯ ಪ್ರಾಥಮಿಕ ಸಂಪರ್ಕದಲ್ಲಿರುವವರ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.