ಬುಧವಾರ, ಜೂನ್ 18, 2025
HomeCorona Updatesಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ 7 ಮಂದಿಗೆ ಸೋಂಕು : ಕಾರ್ಕಡದಲ್ಲಿ ಆಯುಷ್ ವೈದ್ಯರ ಮನೆ...

ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ 7 ಮಂದಿಗೆ ಸೋಂಕು : ಕಾರ್ಕಡದಲ್ಲಿ ಆಯುಷ್ ವೈದ್ಯರ ಮನೆ ಸೀಲ್ ಡೌನ್

- Advertisement -

ಬ್ರಹ್ಮಾವರ/ಹೆಬ್ರಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಇದೀಗ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ 7 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಕಾರ್ಕಡದಲ್ಲಿರುವ ಆಯುಷ್ ವೈದ್ಯರ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.

Alvas1

ಕೊರೊನಾ ಸೋಂಕು ಇದೀಗ ಕೊರೊನಾ ವಾರಿಯರ್ಸ್ ಗಳಿಗೆ ವ್ಯಾಪಿಸುತ್ತಿದೆ. ಒಂದೆಡೆ ಪೊಲೀಸರು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ರೆ ಇದೀಗ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು.

Corona Karkada 1

ಈ ವೇಳೆಯಲ್ಲಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 9 ಸಿಬ್ಬಂದಿಗಳ ಪೈಕಿ ವೈದ್ಯರು ಸೇರಿದಂತೆ ಒಟ್ಟು 7 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತ ವೈದ್ಯರು ಹಾಗೂ ಸಿಬ್ಬಂದಿಯನ್ನು ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಉಳಿದ ಸಿಬ್ಬಂದಿಗಳನ್ನು ಕೂಡ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

Maks Infotech Web1

ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಹೆಬ್ರಿಯ ಸಮುದಾಯ ಆರೋಗ್ಯ ಕೇಂದ್ರವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. ಆರೋಗ್ಯ ಸಿಬ್ಬಂದಿಗಳ ಜೊತೆಗೆ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮಾಡುತ್ತಿದ್ದಾರೆ.

Corona Karkada 2

ಇನ್ನು ಕೋಟ ಕಂದಾಯ ನಿರೀಕ್ಷಕರಾಗಿರುವ ರಾಜು ಅವರ ನೇತೃತ್ವದಲ್ಲಿ ಸಾಲಿಗ್ರಾಮ – ಕಾರ್ಕಡದ ನಾಯರ್ ಕೆರೆ ರಸ್ತೆಯಲ್ಲಿರುವ ವೈದ್ಯರ ಮನೆಯನ್ನು ಕೂಡ ಸೀಲ್ ಡೌನ್ ಮಾಡಲಾಗಿದ್ದು, ಕಂಟೈನ್ಮೆಂಟ್ ಝೋನ್ ಆಗಿ ಪರಿವರ್ತಿಸಲಾಗಿದೆ. ಅಲ್ಲದೇ ಕಾರ್ಕಡ ಗ್ರಾಮವನ್ನು ಬಪರ್ ಝೋನ್ ಆಗಿ ಘೋಷಿಸಲಾಗಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular