10 ದಿನದಲ್ಲಿ 1 ಲಕ್ಷ ಮಂದಿಗೆ ಸೋಂಕು..! ದೇಶದಲ್ಲಿ ಸೋಂಕಿತರ ಸಂಖ್ಯೆ 3ಲಕ್ಷಕ್ಕೆ ಏರಿಕೆ

0

ನವದೆಹಲಿ : ದೇಶದಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ದೇಶದಲ್ಲಿ ಕೇವಲ 10 ದಿನಗಳ ಅವಧಿಯಲ್ಲಿ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ಆವರಿಸಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 3 ಲಕ್ಷಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಮೊದಲ ಬಾರಿಗೆ ಕೇರಳದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಜನವರಿ 30ರಂದು ಕೇರಳದಲ್ಲಿ ಕೊರೊನಾ ಪ್ರಕರಣ ಪತ್ತೆಯಾದ ನಂತರದಲ್ಲಿ ಒಂದೊಂದೆ ರಾಜ್ಯದಲ್ಲಿ ಸೋಂಕು ಆವರಿಸುವುದಕ್ಕೆ ಶುರುವಾಗಿತ್ತು. ಆದರೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷಕ್ಕೆ ಏರಿಕೆಯಾಗಲು ಬರೋಬ್ಬರಿ ನೂರು ದಿನಗಳೇ ಬೇಕಾಗಿತ್ತು. ಆದರೆ ಸೋಂಕಿತರ ಸಂಖ್ಯೆ 2 ಲಕ್ಷಕ್ಕೆ ಏರಿಕೆಯಾಗಲು 15 ರಿಂದ 20 ದಿನಗಳು ಬೇಕಾಗಿತ್ತು. ಜೂನ್ 2ರಂದು ದೇಶದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷಕ್ಕೆ ಏರಿಕೆಯಾಗಿತ್ತು. ಆದ್ರೆ ಸೋಂಕಿತರ ಸಂಖ್ಯೆ 3 ಲಕ್ಷಕ್ಕೆ ಏರಿಕೆಯಾಗಲು ತೆಗೆದುಕೊಂಡಿದ್ದು ಕೇವಲ 10 ದಿನಗಳು ಮಾತ್ರ.

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಅಂಕಿ ಅಂಶಗಳು ನಿಜಕ್ಕೂ ಆತಂಕವನ್ನು ಮೂಡಿಸುತ್ತಿದೆ. ಈಗಾಗಲೇ ಭಾರತ ವಿಶ್ವದಲ್ಲಿಯೇ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ 4ನೇ ಸ್ಥಾನಕ್ಕೇರಿದೆ. ದೇಶದಲ್ಲಿ ಮಹಾರಾಷ್ಟ್ರ ರಾಜ್ಯ ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಕೊರೊನಾ ಪೀಡಿತರ ಸಂಖ್ಯೆ 1 ಲಕ್ಷಕ್ಕೆ ಏರಿಕೆಯಾಗಿದೆ.

ಅಲ್ಲದೇ ದೆಹಲಿ, ತಮಿಳುನಾಡು, ಗುಜರಾತ್ ಹಾಗೂ ಉತ್ತರ ಪ್ರದೇಶದಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಇನ್ನಷ್ಟು ವ್ಯಾಪಿಸುವ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಿದ್ದಾರೆ.

Leave A Reply

Your email address will not be published.