ಬೆಂಗಳೂರು : ರಾಜ್ಯದಲ್ಲಿ ಅಬ್ಬರಿಸುತ್ತಿರುವ ಕೊರೊನಾ ವೈರಸ್ ಸೋಂಕು ಜುಲೈ ಹಾಗೂ ಅಗಸ್ಟ್ ತಿಂಗಳಿನಲ್ಲಿ ಇನ್ನಷ್ಟು ಆರ್ಭಟಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಮುಂದಿನ 6 ತಿಂಗಳ ಕಾಲ ಸೇವೆ ಸಿದ್ದರಾಗಿರಬೇಕೆಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಈಗಾಗಲೇ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆಯನ್ನು ನೀಡುವ ನಿಟ್ಟಿನಲ್ಲಿ ಆಯುಷ್ ಹಾಗೂ ದಂತ ವೈದ್ಯರನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಅಲ್ಲದೇ ಗುತ್ತಿಗೆ ಆಧಾರದ ಮೇಲೆ 80 ವೈದ್ಯರನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರಕಾರ ಮುಂದಾಗಿದೆ.

ಕೊರೊನಾ ರೋಗಿಗಳಿಗೆ ಚಿಕಿತ್ಸೆಯನ್ನು ನೀಡುವ ವೈದ್ಯರು, ಆರೋಗ್ಯ ಸಿಬ್ಬಂಧಿಗಳು ಪಿಪಿಇ ಕಿಟ್ ಮೇಲ್ ಅವರು ಕಾರ್ಯನಿರ್ವಹಿಸುವ ವಿಭಾಗದ ಹೆಸರಿನ ಸ್ಟಿಕ್ಕರ್ ನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಕೊರೊನಾ ವಾರಿಯರ್ಸ್ ಗೆ ಧೈರ್ಯ ತುಂಬುವ ನಿಟ್ಟಿನಲ್ಲಿ ಪಿಪಿಇ ಕಿಟ್ ಬಳಕೆ ಮಾಡುವ ಸಿಬ್ಬಂಧಿಗಳ ವೇತನವನ್ನು ಹೆಚ್ಚಿಸಲಾಗುತ್ತದೆ ಎಂದಿದ್ದಾರೆ.

ತಜ್ಞರು ನೀಡಿರುವ ವರದಿಯ ಪ್ರಕಾರ ಜುಲೈ ಹಾಗೂ ಅಗಸ್ಟ್ ತಿಂಗಳಲ್ಲಿ ಕೊರೊನಾ ಸೋಂಕು ಇನ್ನಷ್ಟು ತೀವ್ರವಾಗಿ ಹರಡುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.