ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು 5 ಜನರಿಗೆ ಮಾತ್ರವೇ ಅವಕಾಶ : ಸರಕಾರದ ಆದೇಶ

ಬೆಂಗಳೂರು : ಕೊರೊನಾ ಮಹಾಸ್ಪೋಟದ ಹಿನ್ನೆಲೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ ಇದೀಗ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಐದು ಮಂದಿಗೆ ಮಾತ್ರ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕರ್ಪ್ಯೂ ಜಾರಿ ಮಾಡುವ ಸಂದರ್ಭದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಸಂದರ್ಭದಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಿತ್ತು. ಸದ್ಯ, ಇದನ್ನು ಮತ್ತಷ್ಟು ಕಡಿಮೆ ಮಾಡಿ ಮಾಡಲಾಗಿದೆ. ಮಾರ್ಗಸೂಚಿ ಪಾಲಿಸಿ ಐದು ಮಂದಿ ಮಾತ್ರ ಭಾಗಿಯಾಗಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿ ದ್ದಾರೆ.

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಕಠಿಣಾತಿ ಕಠಿಣ ನಿಯಮಗಳು ಜಾರಿಗೆ  ಬರುವ ಸಾಧ್ಯತೆಯಿದೆ. ಇದೀಗ ಅಂತ್ಯ ಸಂಸ್ಕಾರಕ್ಕೂ ನಿರ್ಬಂಧವಿಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Comments are closed.