ಕೊರೊನಾ ಆರ್ಭಟ : ಕರ್ನಾಟಕದಲ್ಲಿ 10 ದಿನಗಳ ಕಾಲ ಲಾಕ್ ಡೌನ್ !

0

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ರಾಜ್ಯದಲ್ಲಿ ಈಗಾಗಲೇ ಕೊರೊನಾ ಸೋಂಕಿತರ ಸಂಖ್ಯೆ 6 ಲಕ್ಷದ ಗಡಿದಾಟಿದೆ. ಅದ್ರಲ್ಲೂ ಪ್ರತಿನಿತ್ಯ 10 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಸೋಂಕು ದೃಢಪಡುತ್ತಿದೆ. ಈ ನಡುವಲ್ಲೇ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆಯ ಮಾತು ಕೇಳಿಬಂದಿದೆ.

ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಈಗಾಗಲೇ ಹಲವು ರಾಜ್ಯಗಳು ಲಾಕ್ ಡೌನ್ ಹೇರಿಕೆ ಮಾಡಿವೆ. ಅದ್ರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರೇ ಖುದ್ದು ಮುಖ್ಯಮಂತ್ರಿಗಳ ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿಗೆ ತರುವಂತೆಯೂ ಸೂಚಿಸಿದ್ದಾರೆ.

ಅಲ್ಲದೇ ರಾಜ್ಯಗಳಲ್ಲಿ ಲಾಕ್ ಡೌನ್ ಹೇರಿಕೆ ಮಾಡುವಂತೆಯೂ ಸಿಎಂಗಳಿಗೆ ಸೂಚನೆಯನ್ನು ನೀಡಿದ್ದಾರೆ. ಆದರೆ ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಲಾಕ್ ಡೌನ್ ಹೇರಿಕೆ ಮಾಡುವುದೇ ಇಲ್ಲಾ ಅಂತಾ ಹೇಳುತ್ತಿದೆ. ಆದ್ರೀಗ ಬಿಜೆಪಿಯ ಶಾಸಕರೋರ್ವರು ರಾಜ್ಯದಲ್ಲಿ 10 ದಿನಗಳ ಕಾಲ ಲಾಕ್ ಡೌನ್ ಹೇರಿಕೆ ಮಾಡುವಂತೆ ಸಲಹೆ ನೀಡಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ಸೋಂಕು ಹರಡುತ್ತಿದ್ದು, ಸದ್ಯಕ್ಕೆ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೀಗಾಗಿ 10ದಿನಗಳ ಕಾಲ ಲಾಕ್ ಡೌನ್ ಹೇರಿಕೆ ಮಾಡುವುದೇ ಸೂಕ್ತ. ಲಾಕ್ ಡೌನ್ ಹೇರಿಕೆ ಮಾಡಿದ್ರೆ ಕೊರೊನಾ ಲಿಂಕ್ ಕಟ್ ಆಗುತ್ತೆ. ಅಂತಾ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ. ಮಾತ್ರವಲ್ಲ ರಾಜ್ಯ ಸರಕಾರವನ್ನೂ ಕೂಡ ಅವರು ಒತ್ತಾಯಿಸಿದ್ದಾರೆ.

ಇನ್ನು ಲಾಕ್ ಡೌನ್ ಮಾತ್ರವಲ್ಲ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲೆ, ಕಾಲೇಜುಗಳನ್ನು ಆರಂಭಿಸಬಾರದು. ಶೈಕ್ಷಣಿಕ ಚಟುವಟಿಕೆಗಳು ಆರಂಭವಾದ್ರೆ ಕೊರೊನಾ ಸೋಂಕು ತೀವ್ರ ತೆರನಾಗಿ ಹರಡುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

Leave A Reply

Your email address will not be published.