ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿಂದು 239 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಕೊರೊನಾ ಪೀಡಿತರ ಸಂಖ್ಯೆ 5452ಕ್ಕೆ ಏರಿಕೆಯಾಗಿದೆ. ಆದ್ರೆ ಕರಾವಳಿ ಭಾಗದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

ಕಳೆದೊಂದು ವಾರದಿಂಲೂ ಕೊರೊನಾ ಆಘಾತ ಮೂಡಿಸಿದ್ದ ಉಡುಪಿ ಜಿಲ್ಲೆಯಲ್ಲಿಂದು ಕೊರೊನಾ ಸೋಂಕು ಕೊಂಚ ಮಟ್ಟಿಗೆ ಇಳಿಕೆಯಾಗಿದೆ. ಇಂದು ಕೇವಲ ಮಂದಿ ಮಂದಿಗಷ್ಟೇ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಉಡುಪಿಯಲ್ಲಿ ಸೋಂಕಿತರ ಸಂಖ್ಯೆ 902ಕ್ಕೆ ಏರಿಕೆಯಾಗಿದೆ.

ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿಂದು ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಎರಡೂ ಜಿಲ್ಲೆಯಲ್ಲಿಯೂ 39 ಮಂದಿ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಲಬುರಗಿಯಲ್ಲಿ ಸೋಂಕಿತರ ಸಂಖ್ಯೆ 660ಕ್ಕೆ ಏರಿಕೆಯಾದ್ರೆ ಯಾದಗಿರಿಯಲ್ಲಿ 515ಕ್ಕೆ ಏರಿದೆ.

ಇನ್ನು ಬೆಳಗಾವಿ ಜಿಲ್ಲೆಯಲ್ಲಿ 38 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದರೆ, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ 23, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17, ದಾವಣಗೆರೆ 17, ಶಿವಮೊಗ್ಗ 12, ವಿಜಯಪುರ 9, ಬೀದರ್ 7, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 5, ಹಾಸನ 5, ಧಾರವಾಡ 3, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 2, ಹಾಗೂ ಮಂಡ್ಯ ಮತ್ತು ರಾಯಚೂರು ಜಿಲ್ಲೆಯಲ್ಲಿ ತಲಾ ಒಂದೊಂದು ಕೊರೊನಾ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಕೊರೊನಾ ಮಹಾಮಾರಿಗೆ 61 ಮಂದಿ ಬಲಿಯಾಗಿದ್ರೆ, 2,132 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಉಳಿದಂತೆ 3257 ಮಂದಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.