Kerala Lockdown : ಕೇರಳದಲ್ಲಿ ಕೊರೊನಾ ಹೆಚ್ಚಳ ಜುಲೈ 31 ರಿಂದ ಸಂಪೂರ್ಣ ಲಾಕ್‌ಡೌನ್

ಕೇರಳ : ಕೊರೊನಾ ವೈರಸ್‌ ಸೋಂಇನ ಪ್ರಮಾಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಜುಲೈ 31 ಮತ್ತು ಆಗಸ್ಟ್ 1 ರಂದು ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗಿದೆ. ಕೊರೊನಾ ಸೋಂಕು ಹೆಚ್ಚಳದ ಬೆನ್ನಲ್ಲೇ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ನಿರ್ದೇಶಕರ ನೇತೃತ್ವದಲ್ಲಿ ಕೇಂದ್ರ ಸರಕಾರ 6 ಸದಸ್ಯರ ತಂಡವನ್ನು ಕೇರಳಕ್ಕೆ ಕಳುಹಿಸುತ್ತಿದೆ.

ಕೇರಳದಲ್ಲಿ ದಿನೇ ದಿನೇ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಳದಲ್ಲಿ ವೀಕೆಂಡ್‌ ಕರ್ಪ್ಯೂ ಜಾರಿ ಮಾಡಲಾಗುತ್ತಿದೆ. ದಿನಸಿ ಅಂಗಡಿಗಳು ಕಾರ್ಯ ನಿರ್ವಹಿಸಲಿದ್ದು, ತುರ್ತು ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಈಗಾಗಲೇ ಅನುಮತಿ ಪಡೆದಿರುವ ಫೋಟೋ ಸ್ಟುಡಿಯೋಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟಿದೆ. ಕೃಷಿಕರ ಅನುಕೂಲಕ್ಕಾಗಿ ಬೀಜಗಳು ಮತ್ತು ರಸಗೊಬ್ಬರಗಳನ್ನು ಮಾರಾಟ ಮಾಡುವ ಅಂಗಡಿಗಳನ್ನುಇತ್ತೀಚಿನ ಸರ್ಕಾರದ ನಿರ್ದೇಶನದಲ್ಲಿ ಅಗತ್ಯ ಸೇವೆಗಳ ಕಾರ್ಯನಿರ್ವಹಿಸಲಿದ್ದು, ಉಳಿದಂತೆ ಎಲ್ಲಾ ಸೇವೆಗಳು ಸಂಪೂರ್ಣವಾಗಿ ಬಂದ್‌ ಆಗಲಿದೆ.

ಕೇರಳದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವುದರಿಂದ, ಕೋವಿಡ್ ನಿರ್ವಹಣೆಯಲ್ಲಿ ರಾಜ್ಯದ ನಿರಂತರ ಪ್ರಯತ್ನಗಳಿಗೆ ತಂಡವು ನೆರವು ನೀಡಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.

Comments are closed.