Weekend curfew : ದ.ಕ. ಜಿಲ್ಲೆಯಲ್ಲಿ ವಾರಾಂತ್ಯದ ಕರ್ಪ್ಯೂ : ಪದವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿ ಮಾಡಲಾಗಿದ್ದು, ಪದವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.

ಕೇರಳದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಏರಿಕೆಯನ್ನು ಕಾಣುತ್ತಿದೆ. ಅಲ್ಲದೇ ಮೂರನೇ ಅಲೆಯ ಆತಂಕವೂ ಎದುರಾಗಿದೆ. ಜೊತೆ ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕು ದಾಖಲಾಗುತ್ತಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಕಳೆದ ವಾರದಿಂದಲೇ ವೀಕೆಂಡ್‌ ಕರ್ಪ್ಯೂ ಜಾರಿ ಮಾಡಲಾಗಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದಲೇ ಕರ್ಪ್ಯೂ ಜಾರಿಗೆ ಬರಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯ ವರೆಗೂ ವೀಕೆಂಡ್‌ ಕರ್ಪ್ಯೂ ಜಾರಿಯಲ್ಲಿರಲಿದೆ. ಇನ್ನು ಕರ್ಪ್ಯೂ ವೇಳೆಯಲ್ಲಿ ಮಧ್ಯಾಹ್ನ 2 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವನ್ನು ನೀಡಲಾಗಿದೆ.

ಇದನ್ನೂ ಓದಿ : ದ.ಕ 354, ಉಡುಪಿಯಲ್ಲಿ 159 ಮಕ್ಕಳಿಗೆ ಕೊರೊನಾ : ಕರಾವಳಿಯಲ್ಲಿ ಶುರುವಾಯ್ತು 3ನೇ ಅಲೆಯ ಆತಂಕ

ವಾರಾಂತ್ಯದ ಕರ್ಪ್ಯೂ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಈಗಾಗಲೇ ಶನಿವಾರ ನಿಗದಿಯಾಗಿದ್ದ ಪದವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ. ಅಲ್ಲದೇ ಭಾನುವಾರ ನಡೆಯಲಿರುವ ಸ್ವಾತಂತ್ರ್ಯೋತ್ಸವ ಆಚರಣೆಯನ್ನೂ ಕೂಡ ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳಿಗೆ ಮಾತ್ರವೇ ಸೀಮಿತಗೊಳಿಸಲಾಗಿದ್ದು, ಸಾರ್ವಜನಿಕರು ಭಾಗವಹಿಸದಂತೆ ಸೂಚಿಸಲಾಗಿದೆ.

https://kannada.newsnext.live/bollywood-actress-kanganaranuth-hot-photos-viral-instagram/

Comments are closed.