ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾನುವಾರದ ಲಾಕ್ ಡೌನ್ ಜಾರಿ ಮಾಡಲಾಗಿದೆ. ಆದರೆ ಅನ್ ಲಾಕ್ 2 ಮುಕ್ತಾಯವಾಗುತ್ತಿದ್ದಂತೆಯೇ ಸಂಡೇ ಲಾಕ್ ಡೌನ್ ಕೂಡ ಮುಗಿಯುತ್ತೆ ಅಂತಾ ಅಂದುಕೊಂಡಿದ್ದವರಿಗೆ ರಾಜ್ಯ ಸರಕಾರ ಶಾಕ್ ಕೊಟ್ಟಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿದ್ದಂತೆಯೇ ರಾಜ್ಯ ಸರಕಾರ ರಾತ್ರಿ ಕರ್ಪ್ಯೂ ಜೊತೆ ಜೊತೆಗೆ ಸಂಡೇ ಲಾಕ್ ಡೌನ್ ಆದೇಶವನ್ನು ಜಾರಿ ಮಾಡಲಾಗಿತ್ತು. ಆದ್ರೆ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮತ್ತೆ ಮೂರು ವಾರಗಳ ಕಾಲ ಲಾಕ್ ಡೌನ್ ಆದೇಶವನ್ನು ಮುಂದುವರಿಸಲು ರಾಜ್ಯ ಸರಕಾರ ಮುಂದಾಗಿದೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಕಂದಾಯ ಸಚಿವ ಆರ್.ಅಶೋಕ್ ಅವರು ಸಿಎಂ ಯಡಿಯೂರಪ್ಪ ಜೊತೆಗೆ ಚರ್ಚೆ ನಡೆಸಿದ್ದು, ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅಗಸ್ಟ್ ಅಂತ್ಯದವರೆಗೂ ಸಂಡೇ ಲಾಕ್ ಡೌನ್ ಮುಂದುವರಿಯಲಿದೆ.