ಮೊಬೈಲ್ ಮನೆಯಲ್ಲಿಟ್ಟು ಓಡಾಡಿದ್ರೆ ಕ್ರಿಮಿನಲ್ ಕೇಸ್ !

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಇದೀಗ ಹೋಮ್ ಕ್ವಾರಂಟೈನ್ ನಲ್ಲಿದ್ದವರು ಮೊಬೈಲ್ ಮನೆಯಲ್ಲಿಟ್ಟು ಓಡಾಡಿದ್ರೆ ಅಂತವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ರಾಜ್ಯ ಸರಕಾರ ಎಚ್ಚರಿಕೆಯನ್ನು ನೀಡಿದೆ.

ಕೊರೊನಾ ಸೋಂಕಿತರನ್ನು ಮೊಬೈಲ್ ಮೂಲಕ ಟ್ರ್ಯಾಕ್ ಮಾಡಲಾಗುತ್ತಿದೆ. ಆದ್ರೆ ಕೆಲವು ಸೋಂಕಿತರು ಹಾಗೂ ಹೋಮ್ ಕ್ವಾರಂಟೈನ್ ನಲ್ಲಿರುವವರು ತಮ್ಮ ಮೊಬೈಲ್ ಗಳನ್ನು ಮನೆಯಲ್ಲಿಟ್ಟು ಓಡಾಡುತ್ತಿದ್ದಾರೆ. ಇದರಿಂದಾಗಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವವರು ಅರಿವಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಹೋಮ್ ಕ್ವಾರಂಟೈನ್ ನಲ್ಲಿದ್ದವರು ಮೊಬೈಲ್ ಮನೆಯಲ್ಲಿಟ್ಟು ಹೊರಗೆ ಬಂದ್ರೆ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಕೇವಲ ಒಂದು ಅಪ್ಲಿಕೇಶನ್ ಭರ್ತಿ ಮಾಡಿದ್ರೆ ಸಾಕು ಅಂತವರ ವಿರುದ್ದ ಕ್ರಿಮಿನಲ್ ಕೇಸ್ ಬುಕ್ ಆಗುತ್ತೆ. ಈ ನಿಯಮ ಕೇವಲ ಬೆಂಗಳೂರಿಗೆ ಮಾತ್ರವಲ್ಲ, ರಾಜ್ಯದಾದ್ಯಂತ ಈ ನಿಯಮ ಜಾರಿಯಲ್ಲಿರುತ್ತದೆ.

Leave A Reply

Your email address will not be published.