ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟ : 442 ಮಂದಿಗೆ ಸೋಂಕು, 6 ಮಂದಿ ಸಾವು

0

ಬೆಂಗಳೂರು : ಕೊರೊನಾ ಮಹಾಮಾರಿಯ ಆರ್ಭಟ ಸದ್ಯಕ್ಕೆ ಮುಗಿಯುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ರಾಜ್ಯದಲ್ಲಿಂದು ಬರೋಬ್ಬರಿ 442 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 6 ಮಂದಿಯನ್ನು ಡೆಡ್ಲಿ ಕೊರೊನಾ ಬಲಿ ಪಡೆದಿದೆ.

ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೊನಾ ಸೋಂಕು ಆತಂಕವನ್ನು ತಂದೊಡ್ಡಿದೆ. ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ಶತಕದ ಗಡಿದಾಟಿದೆ. ಬೆಂಗಳೂರಲ್ಲಿಂದು 113 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿಗೆ ತುತ್ತಾದವರ ಸಂಖ್ಯೆ 1791ಕ್ಕೆ ಏರಿಕೆಯಾಗಿದೆ. ಇದುವರೆಗೆ 505 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ರೆ, 1207 ಮಂದಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇನ್ನು ಬೆಂಗಳೂರಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆಯಲ್ಲಿಯೂ ಏರಿಕೆಯನ್ನು ಕಾಣುತ್ತಿದ್ದು, ಇದುವರೆಗೆ 78 ಮಂದಿಯ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿಯೂ ಕೊರೊನಾ ಅಪಾಯವನ್ನು ತಂದೊಡ್ಡುತ್ತಿದೆ. ಜಿಲ್ಲೆಯಲ್ಲಿ ಇಂದೂ ಕೂಡ 35 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 1289ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಯೇ ಕಲಬುರಗಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಎರಡನೇ ಸ್ಥಾನಕ್ಕೇರಿದ್ದು, ಕೊರೊನಾಕ್ಕೆ ಬಲಿಯಾದವರ ಸಂಖ್ಯೆಯಲ್ಲಿಯೂ ದ್ವಿತೀಯ ಸ್ಥಾನದಲ್ಲಿದೆ. ಮಾತ್ರವಲ್ಲ ಗ್ರೀನ್ ಝೋನ್ ವ್ಯಾಪ್ತಿಯಲ್ಲಿದ್ದ ರಾಮನಗರದಲ್ಲಿ ಮಹಾಮಾರಿಯ ಆರ್ಭಟ ದಿನೇ ದಿನೇ ಹೆಚ್ಚುತ್ತಲೇ ಇದೆ. ಇಂದು ಜಿಲ್ಲೆಯಲ್ಲಿ 33 ಮಂದಿಗೆ ಸೋಂಕು ಪತ್ತೆಯಾಗಿದೆ.

ಕರಾವಳಿಯಲ್ಲಿಯೂ ಕೊರೊನಾ ಆರ್ಭಟ ಹೆಚ್ಚುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 29 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 486ಕ್ಕೆ ಏರಿಕೆಯನ್ನು ಕಂಡಿದೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯೂ ಹೆಚ್ಚುತ್ತಿದ್ದು, ಇದುವರೆಗೆ ಕೊರೊನಾ ಮಹಾಮಾರಿ 10 ಮಂದಿ ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದ್ದರೂ ಕೂಡ ದಿನೇ ದಿನೇ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದೆ. ಇಂದು ಉಡುಪಿ ಜಿಲ್ಲೆಯಲ್ಲಿ 14 ಮಂದಿಗೆ ಸೋಂಕು ದೃಢಪಟ್ಟಿದೆ.

ಉಳಿದಂತೆ ಬಳ್ಳಾರಿ ಜಿಲ್ಲೆಯಲ್ಲಿ 26, ಧಾರವಾಡದಲ್ಲಿ 26, ಮೈಸೂರು ಜಿಲ್ಲೆಯಲ್ಲಿ 22, ಬಾಗಲಕೋಟೆಯಲ್ಲಿ 18, ಹಾಸನ ಜಿಲ್ಲೆಯಲ್ಲಿ 12, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 12, ಉತ್ತರ ಕನ್ನಡ ಜಿಲ್ಲೆಯಲ್ಲಿ 11, ವಿಜಯಪುರ 10, ಗದಗ ಜಿಲ್ಲೆಯಲ್ಲಿ 10, ಹಾವೇರಿ 10, ಮಂಡ್ಯ 9, ಬೀದರ್ 8, ದಾವಣಗೆರೆ 7, ಬೆಳಗಾವಿ 4, ಶಿವಮೊಗ್ಗ 4, ಕೋಲಾರ 4, ಯಾದಗಿರಿ 2, ಚಿಕ್ಕಬಳ್ಳಾಪುರ 2, ತುಮಕೂರು 1, ಚಿಕ್ಕಮಗಳೂರು 1 ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಓರ್ವರಿಗೆ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,560ಕ್ಕೆ ಏರಿಕೆಯಾಗಿದ್ದು, ಇಂದು ರಾಜ್ಯದಲ್ಲಿ 519 ಮಂದಿ ಕೊರೊನಾ ಮಹಾಮಾರಿಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ 6670 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 3716 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅಲ್ಲದೇ ಇದುವರೆಗೆ ರಾಜ್ಯದಲ್ಲಿ 170 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

Leave A Reply

Your email address will not be published.