ಕುಂದಾಪುರ, ಬೈಂದೂರಲ್ಲಿ 12 ಕಡೆ ಸೀಲ್ ಡೌನ್ : ಕೊರೊನಾ ವರದಿಗೂ ಮುನ್ನ ಸೋಂಕಿತರರು ಮನೆಗೆ

0

ಕುಂದಾಪುರ : ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಹಾಗೂ ಬೈಂದೂರು ತಾಲೂಕಿನ 12 ಕಡೆಗಳಲ್ಲಿ ಸೀಲ್ ಡೌನ್ ಮಾಡಲಾಗಿದೆ.

ಹೊರ ರಾಜ್ಯಗಳಿಂದ ಬಂದಿದ್ದ ಪ್ರಯಾಣಿಕರನ್ನು ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಆದ್ರೆ ಕೊರೊನಾ ತಪಾಸಣಾ ವರದಿ ಕೈ ಸೇರುವ ಮುನ್ನವೇ ಆರೋಗ್ಯ ಇಲಾಖೆ ಅವರನ್ನು ಮನೆಗೆ ಕಳುಹಿಸಿಕೊಟ್ಟಿದೆ. ಮನೆಗೆ ತಲುಪಿದ ಎರಡೇ ದಿನಗಳಲ್ಲಿ ಬಹುತೇಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಬಸ್ರೂರು, ಕೋಡಿ, ಹಳ್ನಾಡು, ನೇಂಪು, ನೇರಳಕಟ್ಟೆ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದ್ರೆ, ಬೈಂದೂರು ತಾಲೂಕಿನ ನಾವುಂದ, ಬೆಣಗೇರಿ, ಗುಜ್ಜಾಡಿ, ಕಬ್ಸೆ ಸೇರಿದಂತೆ ಒಟ್ಟು 12 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದ್ದು, ಕಂಟೇನ್ಮೆಂಟ್ ಝೋನ್ ಎಂದು ಗುರುತಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕೊರೊನಾ ತಪಾಸಣಾ ವರದಿ ಕೈ ಸೇರುವ ಮೊದಲೇ ಕ್ವಾರಂಟೈನ್ ನಲ್ಲಿದ್ದವರನ್ನು ಮನೆಗೆ ಕಳುಹಿಸಿರುವ ಕುರಿತು ಜಿಲ್ಲೆಯಾಧ್ಯಂತ ವ್ಯಾಪಕ ಟೀಕೆಗಳು ಕೇಳಿಬರುತ್ತಿವೆ. ಕೊರೊನಾ ಸೋಂಕಿತರರು ಮನೆಯಲ್ಲಿ ಒಂದೆರಡು ದಿನಗಳ ಕಾಲ ತಂಗಿರುವುದರಿಂದಾಗಿ ಹತ್ತಾರು ಕಡೆಗಳಲ್ಲಿ ಸೀಲ್ ಡೌನ್ ಮಾಡುವ ಪರಿಸ್ಥಿತಿ ಎದುರಾಗಿದೆ. ಅಧಿಕಾರಿಗಳ ಎಡವಟ್ಟು ಇದೀಗ ಗ್ರಾಮಸ್ಥರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಜಿ್ಲಲಾಡಳಿತ ಈ ಕುರಿತು ಸೂಕ್ತಕ್ರಮಕೈಗೊಳ್ಳಬೇಕೆಂಬ ಕೂಗು ಕೇಳಿಬರುತ್ತಿದೆ.

Leave A Reply

Your email address will not be published.