ದಕ್ಷಿಣ ಕನ್ನಡಕ್ಕೆ ಬಿಗ್ ಶಾಕ್ ಕೊಟ್ಟ ಕೊರೊನಾ : ಒಂದೇ ದಿನ ಮೂರು ಮಂದಿಗೆ ಸೋಂಕು ದೃಢ

0

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಲೇ ಇದೆ. ಇಂದು ಒಂದೇ ದಿನ ಮೂರು ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೋಳೂರಿನ ಇಬ್ಬರು ನಿವಾಸಿಗಳು ಹಾಗೂ ಬಂಟ್ವಾಳದ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಲಾಕ್ ಡೌನ್ ಆದೇಶ ತೆರವು ಮಾಡುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಇಂದು ಮೂವರಿಗೆ ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಬಂಟ್ವಾಳದ ಕಸಬಾ ಗ್ರಾಮದಲ್ಲಿ ಸಾವನ್ನಪ್ಪಿದ್ದ ಮಹಿಳೆಯ 16 ವರ್ಷದ ಬಾಲಕಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ತಾಯಿ ಸತ್ತು ಸುಮಾರು 14 ದಿನಗಳ ನಂತರ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಎಪ್ರಿಲ್ 19 ರಂದು ತಾಯಿ ಸಾವನ್ನಪ್ಪುತ್ತಿದ್ದಂತೆಯೇ ಬಾಲಕಿಯನ್ನು ತಪಾಸಣೆಗೆ ಒಳಪಡಿಸಿದಾಗ ನೆಗೆಟಿವ್ ವರದಿ ಬಂದಿತ್ತು, ಆದ್ರೆ ಬರೋಬ್ಬರಿ 14 ದಿನಗಳ ನಂತರ ಬಾಲಕಿಗೆ ಸೋಂಕು ಕಾಣಸಿಕೊಂಡಿದೆ.

ಈಗಾಗಲೇ ಬಾಲಕಿಯ ತಾಯಿ ಹಾಗೂ ಅಜ್ಜಿ ಕೊರೊನಾದಿಂದಲೇ ಸಾವನ್ನಪ್ಪಿದ್ದರು. ಹೀಗಾಗಿ ಬಾಲಕಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಅಲ್ಲದೇ ಬೋಳೂರಿನಲ್ಲಿಯೂ 35 ವರ್ಷದ ಮಹಿಳೆ ಹಾಗೂ 11 ವರ್ಷದ ಬಾಲಕಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

Leave A Reply

Your email address will not be published.