ರಾಜ್ಯದಲ್ಲಿಂದು 5007 ಮಂದಿಗೆ ಸೋಂಕು, 110 ಮಂದಿ ಸಾವು : ಬೆಂಗಳೂರು, ಉಡುಪಿ, ದ.ಕ., ಮೈಸೂರಲ್ಲಿ ಕೊರೊನಾರ್ಭಟ

0

ಬೆಂಗಳೂರು : ರಾಜ್ಯದಲ್ಲಿಂದು ಕೂಡ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದೆ. ಒಂದು ಒಂದೇ ದಿನ ಬರೋಬ್ಬರಿ 5007 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 110 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು, ಮೈಸೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಬಾಗಲಕೋಟೆಯಲ್ಲಿ ಕೊರೊನಾರ್ಭಟ ಮುಂದುವರಿದಿದೆ.

ಮೈಸೂರಿನಲ್ಲಿ ಕೊರೊನಾ ಸೋಂಕು ದ್ವಿಶತಕ ಬಾರಿಸಿದ್ರೆ, 13 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಶತಕದ ಗಡಿದಾಟಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದೂ ಕೂಡ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿದ್ದು, ಇಂದು 2267 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 41,467ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಒಂದೇ ದಿನ 50 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸಿಲಿಕಾನ್ ಸಿಟಿಯಲ್ಲಿ 833 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಇನ್ನು ಮೈಸೂರಿನಲ್ಲಿಂದು ಕೊರೊನಾ ಸ್ಪೋಟಗೊಂಡಿದೆ. ಇಂದು ಬರೋಬ್ಬರಿ 281 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,450ಕ್ಕೆ ಏರಿಕೆಯನ್ನು ಕಂಡಿದ್ದು, ಒಂದೇ ದಿನ 6 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಕೃಷ್ಣನಗರಿ ಉಡುಪಿಯಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚುತ್ತಿದ್ದು, 190 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ 3 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಬಾಗಲಕೋಟೆಯಲ್ಲಿಯೂ ಸೋಂಕು ಹೆಚ್ಚುತ್ತಿದ್ದು, ಇಂದು 184 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೋಂಕು ಶತಕದಗಡಿ ದಾಟಿದೆ. ಇಂದು 180 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 4,389ಕ್ಕೆ ಏರಿಕೆಯನ್ನು ಕಂಡಿದೆ. ಜಿಲ್ಲೆಯಲ್ಲಿಂದು ಕೂಡ ಮಹಾಮಾರಿ 6 ಮಂದಿಯನ್ನು ಬಲಿ ಪಡೆದಿದೆ.

ಉಳಿದಂತೆ ಧಾರವಾಡದಲ್ಲಿ 174, ಕಲಬುರಗಿ 159, ವಿಜಯಪುರ 158, ಬಳ್ಳಾರಿ 136, ಹಾಸನ 118, ಬೆಳಗಾವಿ 116, ಗದಗ 108. ರಾಯಚೂರು 107, ಚಿಕ್ಕಬಳ್ಳಾಪುರ 92, ಉತ್ತರ ಕನ್ನಡ 88, ಬೀದರ್ 87, ದಾವಣಗೆರೆ 77, ಶಿವಮೊಗ್ಗ 67, ತುಮಕೂರು 59, ಹಾವೇರಿ 59, ಮಂಡ್ಯ 57, ಯಾದಗಿರಿ 53, ಕೊಪ್ಪಳ 39, ಕೋಲಾರ 36, ಚಾಮರಾಜನಗರ 33, ಚಿಕ್ಕಮಗಳೂರು 28, ಬೆಂಗಳೂರು ಗ್ರಾಮಾಂತರ 26, ಚಿತ್ರದುರ್ಗ 13, ರಾಮನಗರ 12 ಹಾಗೂ ಕೊಡಗು 3 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ 31,347 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, 52,791 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave A Reply

Your email address will not be published.