ಒಂದೇ ಕುಟುಂಬದ 21 ಮಂದಿಗೆ ಕೊರೊನಾ ಸೋಂಕು : ಗ್ರಾಮವೇ ಸೀಲ್ ಡೌನ್…!

ಬೆಳಗಾವಿ : ಒಂದೇ ಕುಟುಂಬದ 21 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಡೀ ಗ್ರಾಮವನ್ನೇ ಸೀಲ್ ಡೌನ್ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿ ನಡೆದಿದೆ.

ಮಹಾರಾಷ್ಟ್ರಕ್ಕೆ ನಿತ್ಯವೂ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ 5 ಮಂದಿಗೆ ಈ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ 361 ಮಂದಿಯನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಈ ವೇಳೆಯಲ್ಲಿ ಇನ್ನೂ 16 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಾವನ ಸೌಂದತ್ತಿ ಗ್ರಾಮವನ್ನು ಕಂಟೈನ್ಮೆಂಟ್ ವಲಯವನ್ನಾಗಿ ಘೋಷಿಸಲಾಗಿದೆ.

https://kannada.newsnext.live/sandalwood-robert-darshan-50cr-show-boxoffice-threedayscollection/

ಗ್ರಾಮದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಸ್ಯಾನಿಟೈಸ್ ಮಾಡಲಾಗಿದೆ. ವಾರದ ಸಂತೆಯನ್ನು ರದ್ದುಗೊಳಿಸಲಾಗಿದ್ದು, ಸಾಮಾಜಿಕ ಅಂತರಪಾಲನೆ, ಮಾಸ್ಕ್ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ಮಹಾರಾಷ್ಟ್ರದ ಗಡಿ ಭಾಗಗಳಲ್ಲಿನ ಚೆಕ್ ಪೋಸ್ಟ್ ಗಳನ್ನು ಬಂದ್ ಮಾಡಲಾಗಿದ್ದು, ಹೆಚ್ಚಿನ ನಿಗಾವಹಿಸಲಾಗುತ್ತಿದೆ. ಗ್ರಾಮದಲ್ಲಿ ಇನ್ನಷ್ಟು ಮಂದಿಯ ವರದಿಯನ್ನು ನಿರೀಕ್ಷಿಸಲಾಗಿದೆ.

https://kannada.newsnext.live/ramesh-jarakiholi-house-sale-sadashivanagar/

Comments are closed.