ಉಡುಪಿಯಲ್ಲಿ 281, ದ.ಕ 162 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿಂದು ಕೊರೊನಾರ್ಭಟ

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿಂದು ಕೂಡ ತನ್ನ ಆರ್ಭಟವನ್ನು ಮುಂದುವರಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿಗೆ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿಂದು 4764 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 75,833ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 55 ಮಂದಿಯನ್ನು ಕೊರೊನಾ ಮಹಾಮಾರಿ ಬಲಿ ಪಡೆದಿದ್ದು, ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,519ಕ್ಕೆ ಏರಿಕೆಯನ್ನು ಕಂಡಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಕೊರೊನಾ ಸೋಂಕಿಗೆ ತತ್ತರಿಸಿದೆ. ಬೆಂಗಳೂರಲ್ಲಿಂದು ಕೂಡ ಬರೋಬ್ಬರಿ 2,050 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 36,993ಕ್ಕೆ ಏರಿಕೆಯಾಗಿದ್ರೆ, ಇಂದು ಒಂದೇ ದಿನ 15 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕಿನ ಆರ್ಭಟ ಹೆಚ್ಚಿದೆ. ಕೃಷ್ಣ ನಗರಿ ಉಡುಪಿಯಲ್ಲಿಂದು ಒಂದೇ ದಿನ ಬರೋಬ್ಬರಿ 281 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,686ಕ್ಕೆ ಏರಿಕೆಯಾಗಿದೆ. ಮಹಾಮಾರಿ ಸೋಂಕಿ ಓರ್ವ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯನ್ನು ಕಂಡಿದೆ.

ಕೊರೊನಾದಿಂದ ತತ್ತರಿಸಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೂಡ ಇಂದು 162 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿಂದು 3 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೇ ಸೋಂಕಿತರ ಸಂಕ್ಯೆ 3,991ಕ್ಕೆ ಏರಿಕೆಯಾಗುವ ಮೂಲಕ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿಯೇ ಮುನ್ನುಗ್ಗುತ್ತಿದೆ.

ಉಳಿದಂತೆ ಬೆಳಗಾವಿ ಜಿಲ್ಲೆಯಲ್ಲಿ 219, ಕಲಬುರಗಿ 175, ಧಾರವಾಡ 158, ಮೈಸೂರು 145, ಬೆಂಗಳೂರು ಗ್ರಾಮಾಂತರ 139. ರಾಯಚೂರು 135, ಬಳ್ಳಾರಿ 134, ಚಿಕ್ಕಬಳ್ಳಾಪುರ 110 ಪ್ರಕರಣಗಳು ಪತ್ತೆಯಾಗಿವೆ.

Leave A Reply

Your email address will not be published.