Coronavirus pandemic : ದೇಶದಲ್ಲಿ ಒಂದೇ ದಿನ 1.94 ಲಕ್ಷ ಕೊರೊನಾ ಪ್ರಕರಣ ವರದಿ

Coronavirus pandemic : ದೇಶದಲ್ಲಿ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆಯು ದಿನೇ ದಿನೇ ಮಿತಿ ಮೀರುತ್ತಿದ್ದು 2 ಲಕ್ಷ ಗಡಿಯತ್ತ ತಲುಪಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,94,720 ಹೊಸ ದೈನಂದಿನ ಪ್ರಕರಣಗಳು ವರದಿಯಾಗಿವೆ. ಹಾಗೂ ಕಳೆದೊಂದು ದಿನದಲ್ಲಿ 442 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಅಧಿಕೃತ ಮಾಹಿತಿಯನ್ನು ನೀಡಿದೆ. ಇನ್ನು ಇದರ ಜೊತೆಯಲ್ಲಿ ಕಳೆದ 24 ಗಂಟೆಗಳಲ್ಲಿ 60,405 ಮಂದಿ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ರಿಕವರಿ ರೇಟ್​ 96.36 ಪ್ರತಿಶತವಾಗಿದೆ. ದೇಶದಲ್ಲಿ ಒಟ್ಟು 3,46,30,536 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಪ್ರಸ್ತುತ 9,55,319 ಆ್ಯಕ್ಟಿವ್​ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ. ನಿನ್ನೆಗೆ ಹೋಲಿಕೆ ಮಾಡಿದರೆ ಇಂದಿನ ಕೋವಿಡ್​ ಪ್ರಕರಣದಲ್ಲಿ ಹೆಚ್ಚುವರಿ 26,657 ಪ್ರಕರಣಗಳು ಏರಿಕೆ ಕಂಡಿದೆ. ದೇಶದಲ್ಲಿ ಕೊರೊನಾದಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 4,84,655 ಆಗಿದೆ. ದೈನಂದಿನ ಪಾಸಿಟಿವಿಟಿ ದರ 11.05 ಪ್ರತಿಶತವಾಗಿದೆ.

ಇತ್ತ ಓಮಿಕ್ರಾನ್​ ಸೋಂಕಿನ ಸಂಖ್ಯೆಯು 5 ಸಾವಿರದ ಗಡಿ ಸಮೀಪಿಸುತ್ತಿದ. ಇಲ್ಲಿಯವರೆಗೆ ದೇಶದಲ್ಲಿ ಒಟ್ಟು 4868 ಓಮಿಕ್ರಾನ್​ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಅಂದರೆ 1281 ಓಮಿಕ್ರಾನ್​ ಪ್ರಕರಣಗಳು ವರದಿಯಾಗಿದ್ದರೆ ರಾಜಸ್ಥಾನದಲ್ಲಿ 645 ಓಮಿಕ್ರಾನ್​ ಪ್ರಕರಣಗಳು ಧೃಡಪಟ್ಟಿವೆ.

ಐಸಿಎಂಆರ್​ ನೀಡಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಒಟ್ಟು69,52,74,380 ಕೋವಿಡ್ ಸ್ಯಾಂಪಲ್​ಗಳ ಪರೀಕ್ಷೆಯನ್ನು ಮಾಡಲಾಗಿದೆ. ಇದರಲ್ಲಿ 17,61,900 ಸ್ಯಾಂಪಲ್​ಗಳನ್ನು ಮಂಗಳವಾರ ಪರೀಕ್ಷಿಸಲಾಗಿದೆ.

ಇದನ್ನು ಓದಿ : Bangalore Lockdown : ಬೆಂಗಳೂರಿನಲ್ಲಿ ಕರೋನಾ ರೌದ್ರ ನರ್ತನ : ಸೋಂಕಿನ ಪ್ರಮಾಣ ನಿಯಂತ್ರಿಸಲು ಅನಿವಾರ್ಯವಾಗುತ್ತಾ ಲಾಕ್ ಡೌನ್ ?

ಇದನ್ನೂ ಓದಿ : Bombay High Court : ಕೊರೊನಾ ಲಸಿಕೆ ಪಡೆಯದವರಿಗೆ ತಾರತಮ್ಯ ಮಾಡುವಂತಿಲ್ಲ : ಬಾಂಬೆ ಹೈಕೋರ್ಟ್

ಇದನ್ನೂ ಓದಿ : ಬೆಳಗ್ಗೆ ಎದ್ದ ತಕ್ಷಣ ಈ ವಸ್ತುಗಳನ್ನು ನೋಡಲೇ ಬೇಡಿ

Coronavirus pandemic LIVE Updates: Fresh 1.94 lakh cases take active tally to 211-day high of 9,55,319 lakh

Comments are closed.