Coronavirus pandemic : ದೇಶದಲ್ಲಿ ಒಂದೇ ದಿನ 2.82 ಲಕ್ಷ ದೈನಂದಿನ ಕೊರೊನಾ ಪ್ರಕರಣ ಧೃಡ

Coronavirus pandemic : ಭಾರತದಲ್ಲಿ ಇಂದೂ ಕೂಡ ಕೊರೊನಾ ಸೋಂಕು ತನ್ನ ನಾಗಾಲೋಟವನ್ನು ಮುಂದುವರಿಸಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,82,970 ಮಂದಿಗೆ ಕೋವಿಡ್ ಸೋಂಕು ಧೃಡಪಟ್ಟಿದೆ. ಕಳೆದ ಒಂದು ದಿನದಲ್ಲಿ ದೇಶದಲ್ಲಿ 441 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ. ಇದರ ಜೊತೆಯಲ್ಲಿ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,88,157 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ರಿಕವರಿ ರೇಟ್​ 93.88 ಪ್ರತಿಶತಕ್ಕೆ ಬಂದು ತಲುಪಿದೆ. ದೇಶದಲ್ಲಿ ಈವರೆಗೆ 3,55,83,039 ಕೊರೊನಾದಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ 18,31,000 ಕೋವಿಡ್​ ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. ದೇಶದಲ್ಲಿ ಈವರೆಗೆ ಕೊರೊನಾದಿಂದಾಗಿ 4,87,202 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ 2020ರ ಮಾರ್ಚ್ ತಿಂಗಳಿನಲ್ಲಿ ಕೋವಿಡ್​ ಮೊದಲ ಸಾವು ಸಂಭವಿಸಿತ್ತು.


ಇನ್ನು ಇದರ ಜೊತೆಯಲ್ಲಿ ದೇಶದಲ್ಲಿ ಕೊರೊನಾ ಓಮಿಕ್ರಾನ್​ ಪ್ರಕರಣ 8961ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ ದೈನಂದಿನ ಪಾಸಿಟಿವಿಟಿ ದರ 15.13 ಪ್ರತಿಶತವಾಗಿದೆ .


ನಿನ್ನೆಗೆ ಹೋಲಿಕೆ ಮಾಡಿದರೆ ಇಂದು ಒಟ್ಟು ಹೊಸ ಕೋವಿಡ್​ ಪ್ರಕರಣಗಳ ಸಂಖ್ಯೆಯಲ್ಲಿ 44,889ರಷ್ಟು ಏರಿಕೆ ಕಂಡು ಬಂದಿದೆ. ದೇಶದಲ್ಲಿ ಮಂಗಳವಾರ 2,38,018 ದೈನಂದಿನ ಪ್ರಕರಣಗಳು ವರದಿಯಾಗಿದ್ದವು.
ಇಂಡಿಯನ್​ ಕೌನ್ಸಿಲ್​ ಆಫ್​ ಮೆಡಿಕಲ್​ ರಿಸರ್ಚ್​ ನೀಡಿರುವ ಮಾಹಿತಿಯ ಪ್ರಕಾರ ಜನವರಿ 18ರವರೆಗೆ ದೇಶದಲ್ಲಿ 70,74,21,650 ಕೋವಿಡ್​​ ಪರೀಕ್ಷೆಯನ್ನು ಮಾಡಲಾಗಿದೆ. ಈ ಪೈಕಿ ಮಂಗಳವಾರ 18,69,642 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ.

Coronavirus pandemic Updates: India logs over 2.82 lakh new cases, 441 deaths in last 24 hours

ಇದನ್ನು ಓದಿ : supporters fighting : ಬಿ.ಕೆ.ಹರಿಪ್ರಸಾದ್‌ vs ರಮಾನಾಥ ರೈ : ಬೆಂಬಲಿಗರ ಗಲಾಟೆಗೆ ಹೈಕಮಾಂಡ್‌ ಗರಂ

ಇದನ್ನೂ ಓದಿ : Karnataka school collage close : ಶಾಲೆ ಕಾಲೇಜು 15-20 ದಿನ ಬಂದ್‌ ಮಾಡಿ : ನೈಟ್‌ ಕರ್ಪ್ಯೂಯಿಂದ ಜನಜೀವನಕ್ಕೆ ತೊಂದರೆ : ಎಚ್.ಡಿ.ಕುಮಾರಸ್ವಾಮಿ

Comments are closed.