ದೇಶದಲ್ಲಿ ಕೊರೋನಾ ಹಾಗೂ ಓಮೈಕ್ರಾನ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೀಗಾಗಿ ಕೇಂದ್ರ ಸರ್ಕಾರ ಮಕ್ಕಳಿಗೆ ಲಸಿಕೆ ವಿತರಣೆ ಆರಂಭಿಸಿದ್ದು ಆರೋಗ್ಯ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ, ಫ್ರಂಟ್ ಲೈನ್ ಕಾರ್ಯಕರ್ತರಿಗೆ ಲಸಿಕೆ ವಿತರಿಸುವುದಾಗಿ ಘೋಷಿಸಿದೆ. ಈ ಮಧ್ಯೆ ಬೂಸ್ಟರ್ ಡೋಸ್ (Mixed Booster Dose) ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಯಾಗಿತ್ತು. ಕ್ರಾಸ್ ಬೂಸ್ಟರ್ ಡೋಸ್ ನೀಡೋದರಿಂದ ರೋಗನಿರೋಧಕ ಶಕ್ತಿ ಹೆಚ್ಚಲಿದೆ ಎಂಬ ವಾದವೂ ಆರಂಭವಾಗಿತ್ತು.
ಮಾತ್ರವಲ್ಲ ವಿದೇಶಿ ಮಾದರಿಯಲ್ಲಿ ಎರಡು ಡೋಸ್ ಕೋವಾಕ್ಸಿನ್ ಪಡೆದವರಿಗೆ ಬೂಸ್ಟರ್ ಡೋಸ್ ಆಗಿ ಕೋವಿಶೀಲ್ಡ್ ಹಾಗೂ ಎರಡು ಡೋಸ್ ಕೋವಿಶೀಲ್ಡ್ ಪಡೆದವರಿಗೆ ಒಂದು ಡೋಸ್ ಕೋವಾಕ್ಸಿನ್ ನೀಡಬೇಕೆಂಬ ಮಾತು ಕೇಳಿಬಂದಿತ್ತು. ಆದರೆ ಈ ಎಲ್ಲ ಗೊಂದಲಗಳಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ಕೊಟ್ಟಿದ್ದು ಬೂಸ್ಟರ್ ಡೋಸ್ ಮಿಶ್ರಣ ಯಾವುದೇ ಕಾರಣಕ್ಕೂ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.
ಮೊದಲು ಕೊಟ್ಟಂತೆಯೇ ಬೂಸ್ಟರ್ ಲಸಿಕೆ ನೀಡಲಾಗುತ್ತದೆ. ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್ ಡೋಸ್ ನೀಡಲು ಅವಕಾಶವಿಲ್ಲ. ಈ ಹಿಂದೆ ಮೊದಲ, ಎರಡನೇ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಕೋವಿಶೀಲ್ಡ್, ಕೋವ್ಯಾಕ್ಸಿನ್ 2 ಡೋಸ್ ಲಸಿಕೆ ಪಡೆದವರು ಬೂಸ್ಟರ್ ಡೋಸ್ ಅವುಗಳನ್ನೆ ಪಡೆಯಬೇಕು. ಮಿಕ್ಸ್ ಬೂಸ್ಟರ್ ಡೋಸ್ ನೀಡಲು ಅನುಮತಿಸುವುದಿಲ್ಲ ಎಂದು ಕೇಂದ್ರ ನೀತಿ ಆಯೋಗದ ಸದಸ್ಯ ಡಾ.ವಿಕೆ ಪಾಲ್ ಟ್ವೀಟ್ ಮೂಲಕ ಸೂಚನೆ ನೀಡಿದ್ದಾರೆ.
ಮುಂಚೂಣಿ ಆರೋಗ್ಯ ಕಾರ್ಯಕರ್ತರು, ಆರೋಗ್ಯ ಸೇವಕರು, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಈಗಾಗಲೇ ಬೂಸ್ಟರ್ ಡೋಸ್ ವಿತರಣೆಗೆ ಕೂಡ ಸಿದ್ದತೆ ನಡೆದಿದೆ. ಈ ವೇಳೆ ವಿದೇಶದ ಮಾದರಿಯಲ್ಲಿ ಕ್ರಾಸ್ ಬೂಸ್ಟರ್ ಡೋಸ್ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಅಲ್ಲದೇ ಅದೇ ಹೆಚ್ಚು ಫಲಪ್ರದ ಎಂಬ ವಾದವೂ ಹುಟ್ಟಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವದಂತಿಗಳಿಗೆ ಕೇಂದ್ರ ನೀತಿ ಆಯೋಗ ತೆರೆ ಎಳೆದಿದ್ದು,ಕೇಂದ್ರ ನೀತಿ ಆಯೋಗದ ಸದಸ್ಯ ಡಾ.ವಿಕೆ ಪಾಲ್ ಸ್ಪಷ್ಟನೆಯೊಂದಿಗೆ ಕ್ರಾಸ್ ಬೂಸ್ಟರ್ ಡೋಸ್ ಗೊಂದಲ ಕೊನೆಗೊಂಡಿದೆ. ಇದೇ ಜನವರಿ 10 ರಿಂದ ದೇಶದಲ್ಲಿ ಬೂಸ್ಟರ್ ಡೋಸ್ ವಿತರಣೆ ಆರಂಭವಾಗಲಿದೆ.
ಇದನ್ನೂ ಓದಿ : ಗೋವಾ ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ: ರಾಜ್ಯ ಪ್ರವೇಶಕ್ಕೆ ಪ್ರತ್ಯೇಕ ಮಾರ್ಗಸೂಚಿ
ಇದನ್ನೂ ಓದಿ : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಏನಿರುತ್ತೆ, ಏನಿರಲ್ಲ: ಇಲ್ಲಿದೆ ಮಾಹಿತಿ
( Coveshield or Covaxin vaccine mixed booster dose not allowed central Government )