ನವದೆಹಲಿ: ಕೆಲವು ದಿನಗಳಿಂದ ಕಡಿಮೆಯಾಗಿದ್ದ ಕೊರೊನಾ ವೈರಸ್ ಸೋಂಕಿನ ಆರ್ಭಟ ಇದೀಗ ಭಾರತದಲ್ಲಿ ಏರಿಕೆಯಾಗುವ ಸೂಚನೆ ಕಾಣಿಸುತ್ತಿದೆ. ದೇಶದಲ್ಲಿ ಇಂದು ಹೊಸದಾಗಿ 9,765 ಮಂದಿಗೆ ಕೊರೋನಾ ಪಾಸಿಟಿವ್ (Covid-19 Updates ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಕೊರೊನಾ ಸೋಂಕಿನಿಂದಾಗಿ 477 ಮಂದಿ ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 9,765 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ 8,548 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 99,763 ಸಕ್ರೀಯ ಕೊರೊನಾ ಪ್ರಕರಣಗಳಿವೆ.
#Unite2FightCorona#LargestVaccineDrive
— Ministry of Health (@MoHFW_INDIA) December 2, 2021
𝐂𝐎𝐕𝐈𝐃 𝐅𝐋𝐀𝐒𝐇https://t.co/yFyLYxDNah pic.twitter.com/nX1ztoxJUW
ಆಫ್ರಿಕಾದ ದೇಶಗಳಲ್ಲಿ ಓಮಿಕ್ರಾನ್ ಆರ್ಭಟ ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುವ ಮುನ್ಸೂಚನೆಯನ್ನು ನೀಡುತ್ತಿದೆ. ಈ ಹಿನ್ನೆಲೆ ಯಲ್ಲಿ ಈಗಾಗಲೇ ದೇಶದಲ್ಲಿ ಕೊರೊನಾ ಟೆಸ್ಟಿಂಗ್ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಇನ್ನೊಂದೆಡೆಯಲ್ಲಿ ಕೊರೊನಾ ಲಸಿಕೆ ನೀಡುವ ಕಾರ್ಯಕ್ಕೆ ವೇಗವನ್ನು ನೀಡಲಾಗಿದೆ.
( Covid-19 Updates : 9,765 coronavirus infections in India )