ಕರ್ನಾಟಕದಲ್ಲಿ ದಿಢೀರ್‌ ಕೋವಿಡ್‌ ಸೋಂಕು ಹೆಚ್ಚ: ಇಂದು ತುರ್ತು ಸಭೆ ಕರೆದ ಆರೋಗ್ಯ ಇಲಾಖೆ

ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್‌ ವೈರಸ್‌ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಂಡಿದೆ. ಸದ್ಯ ಪಾಸಿಟಿವಿಟಿ ದರ ಶೇಕಡಾ 2% ರಷ್ಟು ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ನೇತೃತ್ವದಲ್ಲಿಂದು ತುರ್ತು ಸಭೆ (Covid Emergency Meeting) ನಡೆಯಲಿದೆ.

ಆರೋಗ್ಯ ಇಲಾಖೆ ಭಾನುವಾರ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ೪೬೩ ಹೊಸ ಕೋವಿಡ್‌ ಪ್ರಕರಣ ಪತ್ತೆಯಾಗಿತ್ತು. ಅದ್ರಲ್ಲೂ ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕೋವಿಡ್‌ ಸೋಂಕಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡಿದೆ. ನಿನ್ನೆ ಒಂದೇ ೪೨೯ ಮಂದಿ ಕೋವಿಡ್‌ ಸೋಂಕಿಗೆ ತುತ್ತಾಗಿದ್ದಾರೆ. ಸದ್ಯ ರಾಜ್ಯದಲ್ಲಿ ೩,೬೫೧ ಸಕ್ರೀಯ ಕೋವಿಡ್‌ ಪ್ರಕರಣಗಳಿದ್ರೆ, ಬೆಂಗಳೂರಲ್ಲಿ ೩,೪೯೬ ಕೋವಿಡ್‌ ಸಕ್ರೀಯ ಪ್ರಕರಣಗಳಿವೆ. ಒಟ್ಟು ೨೫,೫೧೯ ಮಂದಿಯನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಲಾಗಿದ್ದು, ಶೇ. ೨.೧೫ರಷ್ಟು ಪಾಸಿಟಿವಿಟಿ ದರ ಕಂಡು ಬಂದಿದೆ.

ಆರೋಗ್ಯ ಸಚಿವ ಡಾ.ಸುಧಾಕರ್‌ ಅವರ ನೇತೃತ್ವದಲ್ಲಿಂದು ಕೋವಿಡ್‌ ತಾಂತ್ರಿಕ ಸಮಿತಿಯ ಸಭೆ ನಡೆಯಲಿದೆ. ಸಭೆಯಲ್ಲಿ ತಜ್ಞರು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ಕೋವಿಡ್‌ ವೈರಸ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ಸದ್ಯ ಪಾಸಿಟಿವಿಟಿ ದರ ಎರಡಕ್ಕಿಂತಲೂ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದ್ದು, ಇತರ ಕಠಿಣ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

ಕೋವಿಡ್‌ ವೈರಸ್‌ ಸೋಂಕಿನ ನಾಲ್ಕನೇ ಅಲೆ ಜುಲೈ ತಿಂಗಳಲ್ಲಿ ಹೆಚ್ಚು ಬಾಧಿಸುವ ಕುರಿತು ಈ ಹಿಂದೆಯೇ ಆರೋಗ್ಯ ಇಲಾಖೆ ಸೂಚನೆಯನ್ನು ನೀಡಿತ್ತು. ಇದೀಗ ರಾಜ್ಯದಲ್ಲಿ ಪಾಸಿಟಿವಿಟಿ ದರ ಕೂಡ ದಿನೇ ದಿನೇ ಏರಿಕೆಯಾಗುತ್ತಿದೆ. ಕಳೆದ ಎರಡು ವರ್ಷಗಳ ನಂತರದಲ್ಲಿ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ಸೇರಿದಂತೆ ಎಲ್ಲಾ ಚಟುವಟಿಕೆಗಳು ಸಹಜ ಸ್ಥಿತಿ ಮರಳಿವೆ. ಈ ನಡುವಲ್ಲೇ ಕೋವಿಡ್‌ ಸೋಂಕು ಹೆಚ್ಚುತ್ತಿರುವುದು ಸಹಜವಾಗಿಯೇ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ : Coronavirus : ದೇಶದಲ್ಲಿ ಮೂರು ತಿಂಗಳ ಬಳಿಕ ದೈನಂದಿನ ಕೋವಿಡ್ ಪ್ರಕರಣದಲ್ಲಿ ಗಣನೀಯ ಏರಿಕೆ

ಇದನ್ನೂ ಓದಿ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ

Covid Emergency Meeting call Karnataka Health Minister Dr Sudhakar

Comments are closed.