COVID: ದೇಶದಲ್ಲಿ 24 ಗಂಟೆಗಳಲ್ಲಿ 2841 ಹೊಸ ಕೋವಿಡ್​ ಪ್ರಕರಣ ದೃಢ: 9 ಮಂದಿ ಸಾವು

COVID:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2841 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿದೆ. ಹಾಗೂ 9 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಧಿಕೃತ ಮಾಹಿತಿಯನ್ನು ನೀಡಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನೀಡಿರುವ ದಾಖಲೆಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3295 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ರಿಕವರಿ ಪ್ರಮಾಣವು 98.74 ಪ್ರತಿಶತಕ್ಕೆ ಏರಿಕೆ ಕಂಡಂತಾಗಿದೆ. ದೇಶದಲ್ಲಿ ಕೊರೊನಾದಿಂದ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 4,25,73,460 ಆಗಿದೆ.


ಸಮಾಧಾನಕರ ವಿಚಾರ ಎಂಬಂತೆ ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ದೇಶದಲ್ಲಿ ಪ್ರಸ್ತುತ 18604 ಕೊರೊನಾ ಸಕ್ರಿಯ ಪ್ರಕರಣಗಳು ಇವೆ. ನಿನ್ನೆ ದೇಶದಲ್ಲಿ 19,067 ಕೋವಿಡ್​ ಸಕ್ರಿಯ ಪ್ರಕರಣಗಳು ವರದಿಯಾಗಿದ್ದವು.


ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ 463ರಷ್ಟು ಇಳಿಕೆ ಕಂಡು ಬಂದಿದೆ. ಒಟ್ಟು ಕೊರೊನಾ ಸೋಂಕು ಪ್ರಕರಣದಲ್ಲಿ 0.04 ಪ್ರತಿಶತ ಮಾತ್ರ ಕೊರೊನಾ ಸಕ್ರಿಯ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


ದೇಶದಲ್ಲಿ ಕೊರೊನಾದಿಂದ ಮೃತರಾದವರ ಒಟ್ಟು ಸಂಖ್ಯೆ 5,24,190 ಆಗಿದೆ. ಭಾರತದಲ್ಲಿ 2020ರ ಮಾರ್ಚ್ ತಿಂಗಳಲ್ಲಿ ಮೊದಲ ಕೊರೊನಾ ಸಾವು ಸಂಭವಿಸಿತ್ತು. ದೇಶದಲ್ಲಿ ಪ್ರತಿದಿನ ಪಾಸಿಟಿವಿಟಿ ದರವು 0.58 ಪ್ರತಿಶತವಾಗಿದೆ ಹಾಗೂ ವಾರದ ಪಾಸಿಟಿವಿಟಿ ದರವು 0.69 ಪ್ರತಿಶತವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.


ರೋಗದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,73,460 ಕ್ಕೆ ಏರಿದೆ, ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.22 ರಷ್ಟಿದೆ.

ಇದನ್ನು ಓದಿ : gold rate down Rs 1500 : ಚಿನ್ನಾಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ಚಿನ್ನದ ದರದಲ್ಲಿ 1500 ರೂ. ಇಳಿಕೆ

ಇದನ್ನೂ ಓದಿ : Brendon McCullum : ಬ್ರೆಂಡನ್‌ ಮೆಕಲಮ್‌ ಇಂಗ್ಲೆಂಡ್‌ ತಂಡಕ್ಕೆ ಕೋಚ್‌ : ಕೆಕೆಆರ್‌ ತೊರೆಯುತ್ತಾರಾ ನ್ಯೂಜಿಲೆಂಡ್‌ ಮಾಜಿ ನಾಯಕ

COVID: India reports 2,841 new cases, 9 fatalities in last 24 hours; active cases decline to 18,604

Comments are closed.