Covid rules enforced: ಶಾಲೆ, ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯ, ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ : ಕೋವಿಡ್ ನಿಯಂತ್ರಣಕ್ಕೆ ಹೊಸ ರೂಲ್ಸ್ ಜಾರಿ

ಬೆಂಗಳೂರು : (Covid rules enforced) ಕೋವಿಡ್ ವೈರಸ್ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಠಿಣ ರೂಲ್ಸ್ ಗಳನ್ನು ಜಾರಿಗೊಳಿಸಲಾಗಿದೆ. ಕರ್ನಾಟಕದ ಶಾಲೆ, ಕಾಲೇಜು, ಸಿನಿಮಾ ಮಂದಿರಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ಹೊಸ ವರ್ಷಾಚರಣೆಗೆ ಪ್ರತ್ಯೇಕ ರೂಲ್ಸ್ ಜಾರಿ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಕೋವಿಡ್ ಸೋಂಕಿತ (Covid rules enforced) ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು. ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ನಿಯಮಗಳನ್ನು ಜಾರಿಗೆ ತರಲಾಗಿದೆ. ರಾಜ್ಯದ ಶಾಲೆ, ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.ಶಾಲಾ ಕೊಠಡಿ ಪ್ರವೇಶಿಸುವುದಕ್ಕೂ ಮೊದಲು ಹ್ಯಾಂಡ್‌ ಸ್ಯಾನಿಟೈಜ್‌ ಹಾಕಿಕೊಂಡು ಮಾಸ್ಕ್‌ ಕಡ್ಡಾಯವಾಗಿ ಧರಿಸಿ ಒಳಗಡೆ ಹೋಗುವಂತೆ ಸೂಚಿಸಲಾಗಿದೆ.

ಕೋವಿಡ್ ಸೋಂಕು ಹರಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಆಸ್ಪತ್ರೆಗಳನ್ನು ತೆರೆಯಲು ನಿರ್ಧಾರ ಮಾಡಲಾಗಿದೆ. ಇನ್ನು ಬಾರ್, ಪಬ್ ಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಹಾಗೂ ಗ್ರಾಹಕರು ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ತೆಗೆದುಕೊಂಡಿರಬೇಕು ಎಂದು ತಿಳಿಸಿದ್ದಾರೆ.

ಹೊಸ ವರ್ಷಾಚರಣೆಗೆ ಹೊಸ ರೂಲ್ಸ್ :

ಹೊಸ ವರ್ಷಾಚರಣೆಗೂ ಹೊಸ ರೂಲ್ಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ ಎಂಜಿ ರಸ್ತೆಯಲ್ಲಿ ನಡೆಯುವ ಸಂಭ್ರಮಾಚರಣೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಹೊಂದಿರಲೇ ಬೇಕು. ಹೊಸ ವರ್ಷಾಚರಣೆಯನ್ನು ರಾತ್ರಿ ಒಂದು ಗಂಟೆಯ ವರೆಗೆ ಮಾಡಲು ಅವಕಾಶ ನೀಡಲಾಗಿದೆ. ರಾತ್ರಿ ಒಂದು ಗಂಟೆಯ ನಂತರ ಯಾರಿಗೂ ಕೂಡ ಸಂಭ್ರಮಾಚರಣೆ ನಡೆಸಲು ಅವಕಾಶ ನೀಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ

ಇನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಾತನಾಡಿ, ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ. ಅಂತರಾಷ್ಟ್ರೀಯ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಲು ನಿರ್ಧಾರ ಮಾಡಲಾಗಿದೆ. ಅಲ್ಲದೇ ವಿದೇಶಗಳಿಂದ ಬರುವವರನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತದೆ. ಇನ್ನು ಕೋವಿಡ್ ಸೋಂಕಿತರನ್ನು ನೇರವಾಗಿ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

ಗ್ರಾಮ ಮಟ್ಟದಲ್ಲಿಯೂ ಲಸಿಕಾ ಕೇಂದ್ರ :

ಗ್ರಾಮ ಪಂಚಾಯತ್ ಮಟ್ಟದಿಂದ ಹಿಡಿದು ಜಿಲ್ಲಾಧಿಕಾರಿಗಳ ಮಟ್ಟದ ವರೆಗೂ ಲಸಿಕಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ಅಲ್ಲದೇ ಮೂರನೇ ಡೋಸ್ ಅನ್ನು ಎಲ್ಲರೂ ತೆಗೆದುಕೊಳ್ಳಬೇಕು. ಆದರೆ ವ್ಯಾಕ್ಸಿನ್ ತೆಗೆದುಕೊಳ್ಳುವುದು ಕಡ್ಡಾಯವಲ್ಲ. ಜನರಲ್ಲಿ ಜಾಗೃತಿಯನ್ನು ಮೂಡಿಸಿ ವ್ಯಾಕ್ಸಿನ್ ನೀಡುವ ಕಾರ್ಯವನ್ನು ಮಾಡಲಾಗುತ್ತಿದೆ. ಜನರು ಸ್ವಯಂ ಪ್ರೇರಣೆಯಿಂದಲೇ ಬಂದು ಮೂರನೇ ಡೋಸ್ ವ್ಯಾಕ್ಸಿನ್ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : BF.7 virus in bengaluru: ಬೆಂಗಳೂರಿನಲ್ಲೂ ಕಾಲಿಟ್ಟ BF.7 ಚೀನಾ ವೈರಸ್?‌ ಚೀನಾದಿಂದ ಬಂದಿದ್ದ ವ್ಯಕ್ತಿಗೆ ಸೋಂಕು ದೃಡ

ಕೋವಿಡ್ ನಿಯಂತ್ರಣಕ್ಕೆ ಆಸ್ಪತ್ರೆಗಳು ಸಜ್ಜು :

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನಯ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಇದುವರೆಗೆ ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಒಟ್ಟು 725 ಐಸಿಯು ಬೆಡ್ ಗಳಿದ್ದು, ಸದ್ಯ ಈ ಬೆಡ್ ಗಳ ಸಂಖ್ಯೆಯನ್ನು 2891ಕ್ಕೆ ಹೆಚ್ಚಳ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳನ್ನು ಹೊರತು ಪಡಿಸಿ, ಇನ್ನು ರಾಜ್ಯದಲ್ಲಿ ಒಟ್ಟು 4857 ಆಕ್ಸಿಜನ್ ಬೆಡ್ ವ್ಯವಸ್ಥೆಯಿದ್ದು, ಇದನ್ನು 28,206ಕ್ಕೆ ಹೆಚ್ಚಳ ಮಾಡಲಾಗಿದೆ. 50,816 ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲು ಇಡಲಾಗಿದೆ. ಇನ್ನು ಮಕ್ಕಳಿಗಾಗಿ ಇದುವರೆಗೆ 255 ಹಾಸಿಗೆ ಇದ್ದು, ಇದನ್ನು ಸದ್ಯ 426 ಹಾಸಿಗೆಗೆ ಏರಿಕೆ ಮಾಡಲಾಗಿದೆ. ಅಲ್ಲದೇ ಇದುವರೆಗೆ ಯಾವುದೇ ಎನ್ ಐಸಿಯು ಬೆಡ್ ವ್ಯವಸ್ಥೆ ಇರಲಿಲ್ಲ. ಆದರೆ ಇದೀಗ 593 ಎನ್ ಐಸಿಯು ಬೆಡ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಲ್ಲದೇ ಹೆಚ್ಚುವರಿ ವೈದ್ಯರನ್ನು ಸೇವೆಗೆ ನಿಯೋಜನೆ ಮಾಡಿಕೊಳ್ಳಲಾಗಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

(Covid rules enforced) Strict rules have been implemented in Karnataka in the wake of the fear of the spread of the Covid virus. Masks have been made mandatory in schools, colleges and cinema halls in Karnataka. Also, Revenue Minister R. Ashok said that separate rules have been implemented for the New Year celebrations.

Comments are closed.