ಸೋಮವಾರ, ಏಪ್ರಿಲ್ 28, 2025
HomeCorona UpdatesCovid test compulsory: ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯ

Covid test compulsory: ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯ

- Advertisement -

ಬೆಂಗಳೂರು: (Covid test compulsory) ರಾಜ್ಯದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ವಿದೇಶಗಳಿಂದ ಪ್ರಯಾಣಿಕರು ರಾಜ್ಯದತ್ತ ಹೊಸ ವರ್ಷದ ಆಚರಣೆಗೆ ಧಾವಿಸಿ ಬರುತ್ತಿದ್ದಾರೆ. ವಿದೇಶಗಳಲ್ಲಿ ಕೊರೊನಾ ಸಂಖ್ಯೆ ಉಲ್ಬಣವಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಾಗಿ ನಡೆಸಬೇಕು ಎಂದು ಆರೋಗ್ಯ ಸಚಿವ ಡಾ. ಸುಧಾಕರ್‌ ತಿಳಿಸಿದ್ದಾರೆ.

ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು. ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ನಿಯಮಗಳನ್ನು ಜಾರಿಗೆ ತರಲಾಗಿದೆ. ಹೊಸ ವರ್ಷಾಚರಣೆಗೆ ವಿದೇಶಗಳಿಂದ ಬರುವವರು ಕೋವಿಡ್‌ ಪರೀಕ್ಷೆಯನ್ನು ಕಡ್ಡಾಯವಾಗಿ (Covid test compulsory) ಮಾಡಿಸಬೇಕು.

ಬೆಂಗಳೂರು ಹಾಗೂ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಅನೇಕ ಮಂದಿ ಪ್ರಯಾಣಿಕರು ಬಂದು ಹೋಗುವ ಕಾರಣ ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ತಗುಲಿ ಸೋಂಕು ಹೆಚ್ಚಳವಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಹೀಗಾಗಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗಿದ್ದು, ಈ ಹಿನ್ನಲೆಯಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆಗೆ ಒಳಪಡಲೇಬೇಕು. ಒಂದು ವೇಳೆ ಕೊರೊನಾ ಸೋಂಕು ಇರುವುದು ದೃಡ ಪಟ್ಟಲ್ಲಿ ಅವರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗೆ ದಾಖಲಿಸಲಾಗುವುದು. ಅಲ್ಲದೇ ವಿದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರನ್ನು ಪ್ರತ್ಯೇಕವಾಗಿ ಕ್ವಾರಂಟೈನ್‌ ಗೆ ಒಳಪಡಿಸಲಾಗುತ್ತದೆ.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಾತನಾಡಿ, ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ. ಅಂತರಾಷ್ಟ್ರೀಯ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಲು ನಿರ್ಧಾರ ಮಾಡಲಾಗಿದೆ. ಅಲ್ಲದೇ ವಿದೇಶಗಳಿಂದ ಬರುವವರನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತದೆ. ಇನ್ನು ಕೋವಿಡ್ ಸೋಂಕಿತರನ್ನು ನೇರವಾಗಿ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ : New year-New rules: ಹೊಸ ವರ್ಷಾಚರಣೆಗೆ ಬ್ರೇಕ್‌ : ಹೊಸ ಮಾರ್ಗಸೂಚಿ ಪ್ರಕಟಿಸಿದ ಸರಕಾರ

(Covid test compulsory) New Year celebrations have been held in the state, and in this background travelers from foreign countries are rushing to the state for the New Year celebrations. In the background of the increase in the number of corona virus in foreign countries, to control the corona virus in the state, the covid test should be made mandatory for international travelers. Sudhakar said.

RELATED ARTICLES

Most Popular