ಕೋವಿಡ್ ಲಸಿಕೆ ಪಡೆದ 113 ಮಂದಿ ಪೊಲೀಸರಿಗೆ ಕೊರೊನಾ ಸೋಂಕು

ಬೆಳಗಾವಿ : ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಎಲ್ಲೆಡೆ ಲಸಿಕೆ ನೀಡಲಾಗುತ್ತಿದೆ. ಆದರೆ ಕೋವಿಡ್ ಲಸಿಕೆ ಪಡೆದ 113 ಮಂದಿ ಪೊಲೀಸರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಬೆಳಗಾವಿ ಡಿಸಿಪಿ ವಿಕ್ರಂ ಆಮ್ಟೆ ತಿಳಿಸಿದ್ದಾರೆ.

ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯಲ್ಲಿ 66 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಬೆಳಗಾವಿ ಜಿಲ್ಲೆಯಲ್ಲಿ 33 ಹಾಗೂ ಕೆಎಸ್ಆರ್ ಪಿಯ 11 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಎಲ್ಲರನ್ನೂ ಐಸೋಲೇಷನ್ ಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ 113 ಪೊಲೀಸ್ ಸಿಬ್ಬಂದಿಗಳು ಲಸಿಕೆಯನ್ನು ಪಡೆದಿರುವುದರಿಂದಾಗಿ ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ.

Comments are closed.