ಮಂಗಳೂರಿಗೆ ಕೇರಳ ವೈರಸ್‌ ಕಂಟಕ : ದ.ಕ. ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಸೋಂಕು

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಆರ್ಭಟ ಕರಾವಳಿಯನ್ನು ತತ್ತರಿಸುವಂತೆ ಮಾಡುತ್ತಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಸೋಂಕು ದೃಢಪಟ್ಟಿದೆ. ಈ ಮೂಲಕ ಕೇರಳ ಸೋಂಕು ಕರಾವಳಿಗೆ ಅಪಾಯವನ್ನು ತಂದೊಡ್ಡುವ ಆತಂಕ ಸೃಷ್ಟಿಯಾಗಿದೆ.

ರಾಜ್ಯದ ಇತರ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿದ್ದರೂ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯನ್ನು ಕಾಣುತ್ತಿದೆ. ಇತ್ತೀಚಿನ ದಿನಗಳಲ್ಲಿ ನಿತ್ಯವೂ 300ರಿಂದ 400 ಪ್ರಕರಣ ದಾಖಲಾಗುತ್ತಿದೆ.

ಅಲ್ಲದೇ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ನಿಯಂತ್ರಣಕ್ಕೆ ಬರುತ್ತಿಲ್ಲ. ಅದ್ರಲ್ಲೂ ಮಂಗಳೂರು ನಗರ, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿಯೇ ಅತೀ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್‌ ಹೆಚ್ಚುತ್ತಿದ್ದು, ಸೋಂಕು ಇನ್ನಷ್ಟು ತೀವ್ರವಾಗಿ ಹರಡುವ ಆತಂಕವನ್ನು ಮೂಡಿಸಿದೆ.

ಕೇರಳದಲ್ಲಿ ನಿತ್ಯವೂ ಇಪತ್ತು ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದು, ಕೇರಳದ ಗಡಿಭಾಗದ ಜಿಲ್ಲೆಯಾಗಿರುವ ದಕ್ಷಿಣ ಕನ್ನಡಕ್ಕೂ ಸೋಂಕಿನ ಪ್ರಮಾಣ ವ್ಯಾಪಿಸುತ್ತಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ ವೀಕೆಂಡ್‌ ಕರ್ಪ್ಯೂ, ನೈಟ್‌ ಕರ್ಪ್ಯೂ ಜಾರಿ ಮಾಡಲಾಗಿದ್ದು, ಇನ್ನಷ್ಟು ಕಠಿಣ ನಿಯಮ ಜಾರಿಗೆ ಚಿಂತನೆ ನಡೆದಿದೆ.

Comments are closed.