ಕೋವಿಡ್ ನಿಯಮ ಉಲ್ಲಂಘಿಸಿ ಮದುವೆ ಪಾರ್ಟಿ : ವೈರಲ್ ಆಯ್ತು ವಿಡಿಯೋ : ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

0

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ. ಅದ್ರಲ್ಲೂ ಕೋವಿಡ್ ವೈರಸ್ ಸೋಂಕಿನ ಹಿನ್ನೆಲೆ ಕೇಂದ್ರ ಸರಕಾರ ಕೋವಿಡ್ ಕುರಿತು ಮಾರ್ಗಸೂಚಿಯನ್ನು ಹೊರಡಿಸಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದಲ್ಲಿ ನಿಯಮ ಉಲ್ಲಂಘಿಸಿ ಡಿಜೆ ಪಾರ್ಟಿ ನಡೆಸಲಾಗಿದೆ.

https://youtu.be/ivmifpE_vWw

ಕೊರೊನಾ ನಡುವಲ್ಲೇ ಮದುವೆ ಸಮಾರಂಭಕ್ಕೆ ಅವಕಾಶವನ್ನು ಕಲ್ಪಿಸಿದ್ದು, ಮದುವೆಗೆ ಸರಕಾರದ ಮಾರ್ಗಸೂಚಿಯಂತೆ ಕೇವಲ 50 ಜನರು ಪಾಲ್ಗೊಳ್ಳಲು ಅವಕಾಶವಿದೆ. ಆದ್ರಿಲ್ಲಿ ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಡಿಜೆ ಪಾರ್ಟಿ ಮಾಡಲಾಗಿದೆ. ಸುಮಾರು 200ಕ್ಕೂ ಅಧಿಕ ಮಂದಿ ಮೆಹಂದಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಸಾಮೂಹಿಕವಾಗಿ ಡ್ಯಾನ್ಸ್ ಮಾಡುವ ವೇಳೆಯಲ್ಲಿ ಮಾಸ್ಕ್ ಧರಿಸಿಲ್ಲ. ಅಲ್ಲದೇ ಸಾಮಾಜಿಕ ಅಂತರವನ್ನು ಉಲ್ಲಂಘಿಸಲಾಗಿದೆ.

https://youtu.be/vetPFQ2keZY

ಯುವಕ, ಯುವತಿಯರು ಡಿಜೆ ಪಾರ್ಟಿಯಲ್ಲಿ ಕುಣಿದು ಕುಪ್ಪಳಿದಿದ್ದಾರೆ. ಡಿಜೆ ಪಾರ್ಟಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಜಿಲ್ಲಾಡಳಿತ ಮಾತ್ರ ಇದುವರೆಗೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲವೆಂಬ ಆರೋಪ ಕೇಳಿಬಂದಿದೆ.

Leave A Reply

Your email address will not be published.