ಜ್ವರ, ಶೀತ, ಕೆಮ್ಮದ ಲಕ್ಷಣವಿದ್ರೆ ಕೊರೊನಾ ಟೆಸ್ಟ್‌ ಕಡ್ಡಾಯ : ಉಡುಪಿ ಡಿಸಿ

ಉಡುಪಿ : ಖಾಸಗಿ ಆಸ್ಪತ್ರೆಗಳಲ್ಲಿ ಜ್ವರ, ಶೀತ, ಕೆಮ್ಮದ ಲಕ್ಷಣದ ಹೊಂದಿರುವವರನ್ನು ಕಡ್ಡಾಯವಾಗಿ ಕೊರೊನಾ ಟೆಸ್ಟ್‌ಗೆ ಒಳಪಡಿಸಬೇಕೆಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಕೋವಿಡ್‌ ತಾಂತ್ರಿಕ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸಲಾಗಿದ್ದು, ಸ್ವಾಬ್‌ ಸಂಗ್ರಹ ಮಾಡಿದ 24 ಗಂಟೆಯ ಒಳಗಾಗಿ ಲ್ಯಾಬ್‌ಗಳು ವರದಿಯನ್ನು ನೀಡುವಂತೆ ಸೂಚನೆಯನ್ನು ನೀಡಲಾಗಿದೆ. ಒಂದೊಮ್ಮೆ ವರದಿಯನ್ನು ನೀಡುವಲ್ಲಿ ವಿಫಲವಾದರೆ, ಪಕ್ಕದ ಜಿಲ್ಲೆಗಳಿಗೆ ಸ್ವಾಬ್‌ ಕಳುಹಿಸಿ ವರದಿ ಪಡೆಯುವಂತೆ ಸೂಚಿಸಿದ್ದಾರೆ.

ಕೊರೊನಾ ಮೂರನೇ ಅಲೆಯ ಕುರಿತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಮಕ್ಕಳ ವಾರ್ಡ್‌ ನಿರ್ಮಾಣದ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಸೂಚಿಸಿ ದ್ದಾರೆ. ಅಲ್ಲದೇ ವೈದ್ಯಕೀಯ ಉಪಕರಣಗಳನ್ನು ವಾರ್ಡ್‌ನಲ್ಲಿ ಅಳವಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ವಿದ್ಯಾಭ್ಯಾಸಕ್ಕಾಗಿ ಕೇರಳ ಸೇರಿದಂತೆ ಹೊರ ರಾಜ್ಯಗಳಿಂದ ಆಗಮಿಸುವ ವಿದ್ಯಾರ್ಥಿಗಳನ್ನು 1 ವಾರಗಳ ಕಾಲ ಕ್ವಾರಂಟೈನ್‌ಗೆ ಒಳಪಡಿಸಬೇಕು. ಅಲ್ಲದೇ ಒಂದು ವಾರದ ನಂತರ ಕೋವಿಡ್‌ ಪರೀಕ್ಷೆ ನಡೆಸುವಂತೆ ಆರೋಗ್ಯಾಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ನಿತ್ಯವೂ ಹತ್ತು ಸಾವಿರ ಕೋವಿಡ್‌ ಪರೀಕ್ಷೆಯನ್ನು ನಡೆಸುವಂತೆ ಜಿಲ್ಲಾಧಿಕಾರಿಗಳು ಈ ಹಿಂದೆಯೇ ಸೂಚನೆಯನ್ನು ನೀಡಿದ್ದಾರೆ. ಈಗಾಗಲೇ ಜಿಲ್ಲೆಯ ಗಡಿಗಳಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ : ಹೇರ್‌ಬ್ಯಾಂಡ್‌ನಲ್ಲಿ ಚಿನ್ನ ಸಾಗಾಟ : ಏರ್‌ಪೋರ್ಟ್‌ನಲ್ಲಿ 21 ಲಕ್ಷ ಮೌಲ್ಯದ ಚಿನ್ನವಶ

ಇದನ್ನೂ ಓದಿ : ಈ ಬಾರಿ ಅದ್ದೂರಿ ಗಣೇಶೋತ್ಸವ, ಸಡಿಲವಾಗುತ್ತಾ ಕೋವಿಡ್‌ ನಿಯಮ : ಸಚಿವ ಸುನಿಲ್‌ ಕುಮಾರ್‌ ಕೊಟ್ರು ಸುಳಿವು

( Fever, cold, cough syndrome Corona Test compulsory: Udupi DC)

Comments are closed.