Guidelines for H3N2 infection: H3N2 ಸೋಂಕಿನ ಬಗ್ಗೆ ಆತಂಕ ಬೇಡ: ಆರೋಗ್ಯ ಸಚಿವ ಸುಧಾಕರ್‌

ಬೆಂಗಳೂರು : (Guidelines for H3N2 infection) ದೇಶದಲ್ಲಿ ಕೊರೊನಾ ಆತಂಕ ಬಳಿಕ ಇದೀಗ ಕೊರೊನಾ ರೀತಿಯಲ್ಲೇ ಮತ್ತೊಂದು H3N2 ಸೋಂಕು ಕಂಡುಬಂದಿದ್ದು, ಇದರ ಬಗ್ಗೆ ಜನ ಇನ್ನಷ್ಟು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ್‌ ಆರೋಗ್ಯ ತಜ್ಞರ ಜೊತೆ ಮಹತ್ವದ ಸಭೆ ನಡೆಸಿದ್ದು, ಈ ಸಭೆಯಲ್ಲಿ ಈ H3N2 ಸೋಂಕಿನ ಬಗ್ಗೆ ಪರಿಣಾಮಕಾರಿ ಚರ್ಚೆಗಳನ್ನು ಮಾಡಲಾಗಿತ್ತು, ಸಭೆ ಬಳಿಕ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಸುದ್ದಿಗೋಷ್ಠಿ ನಡೆಸಿದ್ದು, H3N2 ಸೋಂಕಿನ ಬಗೆ ಯಾವು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಹಾಗೂ ದೇಶದಲ್ಲಿ ಹೊಸ ವೈರಸ್‌ H3N2 ಆತಂಕ ಹೆಚ್ಚಾಗಿದ್ದು, ಈ ಕುರಿತು ಆರೋಗ್ಯ ಸಚಿವ ಸುಧಾಕರ್‌ ಬೆಂಗಳೂರಿನಲ್ಲಿ ನಿನ್ನೆ ಮಹತ್ವದ ಸಭೆ ನಡೆಸಿದ್ದರು. ರಾಜ್ಯದಲ್ಲಿ H3N2 ಸೋಂಕು ತಡೆಗಟ್ಟಲು ಯಾವ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ತಜ್ಞರ ಜೊತೆ ಚರ್ಚೆ ನಡೆಸಿದ್ದು, ಬಳಿಕ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, H3N2 ಸೋಂಕು ಬಗ್ಗೆ ಯಾವುದೇ ಆತಂಕ ಬೇಡ ಎಂದು ಸುಧಾಕರ್‌ ಹೇಳಿದ್ದಾರೆ. ಜೊತೆಗೆ ಕೆಲವು ಮಾರ್ಗಸೂಚಿಗಳನ್ನು ಸಹ ತಿಳಿಸಿದ್ದಾರೆ.

  • ಆರೋಗ್ಯ ಇಲಾಖೆಗಳಲ್ಲಿ ಎಲ್ಲಾ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು.
  • ಇಂದಿನಿಂದಲೇ ಆರೋಗ್ಯ ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.
  • ಮಕ್ಕಳು ಹಾಗೂ ಗರ್ಭಿಣಿಯರು ಮುಂಜಾಗ್ರತಾ ಕ್ರಮ ವಹಿಸಬೇಕು.

ದೀರ್ಘಕಾಲದಿಂದ ಕೆಮ್ಮು ಹಾಗೂ ಜ್ವರದ ಲಕ್ಷಣ ಇದ್ದರೆ H3N2 ವೈರಸ್ ಕಾರಣವಾಗಿರಬಹುದು. ದೇಶಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ರೋಗಲಕ್ಷಣ ಉಂಟಾದರೆ ಪರೀಕ್ಷೆ ನಡೆಸಿ. ಆ್ಯಂಟಿಬಯೋಟಿಕ್ ಮಾತ್ರೆಗಳನ್ನು ಬಳಸದಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಕೊರೋನಾ ಉಲ್ಬಣ: ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಮಹತ್ವದ ಸಭೆ ಕರೆದ ಕೆ.ಸುಧಾಕರ್‌

ಇದನ್ನೂ ಓದಿ : COVID-19 ಹುಟ್ಟಿಕೊಂಡಿದ್ದು ಎಲ್ಲಿಂದ? ಇಲ್ಲಿದೆ ಸಾಂಕ್ರಾಮಿಕ ರೋಗದ ಬಗ್ಗೆ ಒಂದು ಸಣ್ಣ ನೋಟ

ಇದನ್ನೂ ಓದಿ : India New Covid cases: ಭಾರತದಲ್ಲಿ ಮತ್ತೆ 193 ಹೊಸ ಕೋವಿಡ್ ಕೇಸ್ ಗಳು ಪತ್ತೆ: ದೆಹಲಿಯಲ್ಲಿ ಒಂದು ಸಾವು

Guidelines for H3N2 infection: Do not worry about H3N2 infection: Health Minister Sudhakar

Comments are closed.