ಬೆಂಗಳೂರು : health minister dr k sudhakar : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎ 2 ಮಾದರಿಯ ಕೊರೊನಾ ತಳಿ ಇರುವಿಕೆ ಧೃಡಪಟ್ಟ ಬಳಿಕ ರಾಜ್ಯ ಸರ್ಕಾರವು ಅಲರ್ಟ್ ಆಗಿದೆ. ಸಂಭಾವ್ಯ ಕೊರೊನಾ ನಾಲ್ಕನೇ ಅಲೆಯ ಭೀತಿಯ ನಡುವೆಯೇ ಯಾವೆಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ. ನಿನ್ನೆಯಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ತಜ್ಞರ ಜೊತೆ ಸಭೆ ಕರೆದು ಕೊರೊನಾ ನಾಲ್ಕನೇ ಅಲೆ ಬೇರೆಲ್ಲ ದೇಶಗಳಲ್ಲಿ ಯಾವ ರೀತಿಯಲ್ಲಿ ಭೀಕರತೆ ಸೃಷ್ಟಿಸುತ್ತಿದೆ ಎಂಬುದರ ಬಗ್ಗೆ ಚರ್ಚೆ ನಡೆಸಿದ್ದರು. ಸಿಎಂ ಸಭೆ ಬೆನ್ನಲ್ಲೇ ಇಂದು ಅಧಿಕಾರಿಗಳು ಕೊರೊನಾ 4ನೇ ಅಲೆ ಸಂಬಂಧ ಸಭೆ ನಡೆಸಲಿದ್ದಾರೆ. ಈ ವರ್ಚುವಲ್ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಭಾಗಿಯಾಗಲಿದ್ದಾರೆ.
ಇನ್ನು ಈ ಸಭೆಗೂ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಕೊರೊನಾ ನಾಲ್ಕನೇ ಅಲೆಯು ರಾಜ್ಯಕ್ಕೂ ಅಪ್ಪಳಿಸುವ ಬಗ್ಗೆ ವರದಿ ಸಿಕ್ಕಿದೆ. ಕೊರೊನಾ ನಾಲ್ಕನೇ ಅಲೆಯ ಬಗ್ಗೆ ಹೆಚ್ಚು ಭಯ ಪಡಬೇಕಾಗಿಲ್ಲ. ನಿನ್ನೆ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲವೊಂದು ಸರಳ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದೇವೆ. ಅದನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಅಂತಾರಾಜ್ಯ ಪ್ರಯಾಣಿಕರ ಮೇಲೆ ನಿಗಾ ಇಡಲಾಗುತ್ತದೆ . ನಾವು ಯಾರ ಬಳಿಯೂ ಹಬ್ಬಗಳನ್ನು ಆಚರಿಸಬೇಡಿ ಎಂದು ಹೇಳಿಲ್ಲ. ಆದರೆ ಸುರಕ್ಷತಾ ಕ್ರಮಗಳ ಜೊತೆಯಲ್ಲಿ ಹಬ್ಬಗಳನ್ನು ಆಚರಿಸಿ. ರಾಜ್ಯದ ಎಲ್ಲಾ ಆರೋಗ್ಯಾಧಿಕಾರಿಗಳ ಜೊತೆಯಲ್ಲಿ ನಾವು ಮಾತನಾಡಿದ್ದೇವೆ ಎಂದು ಹೇಳಿದರು.
ನಿನ್ನೆ ತಜ್ಞರ ಜೊತೆಯಲ್ಲಿ ಸಿಎಂ ಗೃಹ ಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ ಕೊರೊನಾ ನಾಲ್ಕನೇ ಅಲೆಯು ಬಾರದಂತೆ ತಡೆಯಲು ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯ್ತು. ಸಭೆ ಮುಕ್ತಾಯಗೊಂಡ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಆದರೆ ಮಾಸ್ಕ್ ಹಾಕದವರಿಗೆ ದಂಡ ವಿಧಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸಾಮಾಜಿಕ ಅಂತರ ಕಾಪಾಡುವುದು ಅನಿವಾರ್ಯ . 60 ವರ್ಷ ಮೇಲ್ಪಟ್ಟವರು ಹಾಗೂ ಹೃದ್ರೋಗಗಳಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ಕೂಡಲೇ ಕೊರೊನಾ ಬೂಸ್ಟರ್ ಡೋಸ್ ಪಡೆಯಿರಿ ಎಂದು ಹೇಳಿದ್ದರು.
ಇದನ್ನು ಓದಿ : psi appointment scam : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್ ಪಿನ್ ರುದ್ರೇಗೌಡ ವಶಕ್ಕೆ
ಇದನ್ನೂ ಓದಿ : Aadhaar PAN link : ನಿಮ್ಮ ಆಧಾರ್ ಅನ್ನು ಪ್ಯಾನ್‌ನೊಂದಿಗೆ ಲಿಂಕ್ ಆಗಿದೆಯಾ ? ಮೊಬೈಲ್‌ನಲ್ಲೇ ಚೆಕ್ ಮಾಡಿ
health minister dr k sudhakar reacts on coronavirus 4th wave in karnataka