ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಪಾಸಿಟಿವ್

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ಇದೀಗ ರಾಜಕಾರಣಿಗಳ ಬೆನ್ನು ಬಿದ್ದಿದೆ. ಇದೀಗ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಶ್ರೀರಾಮುಲು ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೊರೊನಾ ತಪಾಸಣೆ ನಡೆಸಿದಾಗ ಕೊರೊನಾ ಪಾಸಿಟಿವ್ ಬಂದಿದೆ ಎಂದು ಶ್ರೀರಾಮುಲು ಅವರು ಟ್ವೀಟ್ ಮಾಡಿದ್ದಾರೆ.

ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ದಿನದಿಂದಲೂ ರಾಜ್ಯದ 30 ಜಿಲ್ಲೆಗಳಿಗೂ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವ ಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದಿದ್ದಾರೆ.

ಆದಷ್ಟು ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದ ಸಚಿವ ಶ್ರೀರಾಮುಲು ಅವರು ತನ್ನ ಜೊತೆಗೆ ಇತ್ತೀಚಿಗೆ ಸಂಪರ್ಕದಲ್ಲಿದ್ದವರು ಮುನ್ನೆಚ್ಚರಿಕೆ ವಹಿಸುವಂತೆಯೂ ಮನವಿ ಮಾಡಿಕೊಂಡಿದ್ದಾರೆ.

Leave A Reply

Your email address will not be published.