CM Meeting : ವೀಕೆಂಡ್​ ಕರ್ಫ್ಯೂ ಬಗ್ಗೆ ಈಗೇನು ಹೇಳಲಾರೆ, ಪ್ರಧಾನಿ ಜೊತೆ ಸದ್ಯದಲ್ಲೇ ಸಭೆ : ಸಭೆ ಬಳಿಕ ಗೃಹಸಚಿವರ ಹೇಳಿಕೆ

CM Meeting :ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈಗಾಗಲೇ ವೀಕೆಂಡ್ ಕರ್ಫ್ಯೂ, ನೈಟ್​ ಕರ್ಫ್ಯೂಗಳನ್ನು ಜಾರಿಗೆ ತಂದರೂ ಸಹ ಸೋಂಕು ತಹಬದಿಗೆ ಬರುತ್ತಿಲ್ಲ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಯ್ತು. ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗಿಯಾದರು. ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ಇರುವ ಹಿನ್ನೆಲೆಯಲ್ಲಿ ವರ್ಚುವಲ್​ ಸಭೆಯ ಮೂಲಕ ಮಾತುಕತೆ ನಡೆಸಲಾಯ್ತು. ಈ ಸಭೆಯಲ್ಲಿ ಹಲವು ಟಫ್​ ರೂಲ್ಸ್​ಗಳನ್ನು ಜಾರಿಗೆ ತರುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆ ಮುಕ್ತಾಯದ ಬಳಿಕ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು. ವೈಕುಂಠ ಏಕಾದಶಿಯ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಹೆಚ್ಚಿನ ಜನರು ಸೇರುವಂತಿಲ್ಲ. ದೇಗುಲಗಳಲ್ಲಿ ಹೆಚ್ಚಿನ ಜನರು ಸೇರದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.


ವೀಕೆಂಡ್​ ಕರ್ಫ್ಯೂ ಭವಿಷ್ಯದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ವೀಕೆಂಡ್​ ಕರ್ಫ್ಯೂ ಬಗ್ಗೆ ಸಧ್ಯಕ್ಕೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಜನವರಿ 14ರಂದು ಪ್ರಧಾನಿ ದೇಶದ ಎಲ್ಲಾ ಮುಖ್ಯಮಂತ್ರಿಗಳ ಜೊತೆಯಲ್ಲಿ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.


ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಸೋಂಕನ್ನು ತಹಬದಿಗೆ ತರಬೇಕು ಅಂದರೆ ಜನದಟ್ಟಣೆಯನ್ನು ತಪ್ಪಿಸಲೇಬೇಕು. ಹೀಗಾಗಿ ಪ್ರತಿಭಟನೆ, ಜಾತ್ರೆ, ದೊಡ್ಡ ಕಾರ್ಯಕ್ರಮಗಳ ಹೆಸರಿನಲ್ಲಿ ಜನರು ಸೇರುವಂತಿಲ್ಲ. ದೊಡ್ಡ ಕಾರ್ಯಕ್ರಮಗಳನ್ನು ನಡೆಸಿದರೂ ಸಹ ಅಲ್ಲಿ ಜನರು ಸೇರದಂತೆ ನೋಡಿಕೊಳ್ಳುವುದು ಆಯೋಜಕರ ಜವಾಬ್ದಾರಿ ಎಂದು ಹೇಳಿದರು.


ಇನ್ನು ಶಾಲಾ, ಕಾಲೇಜುಗಳನ್ನು ಬಂದ್​ ಮಾಡುವ ವಿಚಾರವಾಗಿಯೂ ಮಾತನಾಡಿದ ಅವರು ಶಾಲೆ ಹಾಗೂ ಕಾಲೇಜುಗಳನ್ನು ಬಂದ್​ ಮಾಡುವುದು ಆಯಾ ಡಿಸಿಗಳಿಗೆ ಬಿಟ್ಟ ವಿಚಾರವಾಗಿದೆ. ಸ್ಥಳೀಯವಾಗಿ ಕೊರೊನಾ ಪ್ರಕರಣಗಳ ತೀವ್ರತೆಯನ್ನು ನೋಡಿಕೊಂಡು ಶಾಲೆಗಳನ್ನು ನೋಡಿಕೊಳ್ಳುವ ಬಗ್ಗೆ ಡಿಸಿಗಳು ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.


ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯವಿದೆ. ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗುಲುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಹೀಗಾಗಿ ಜಿಲ್ಲಾ ಆರೋಗ್ಯ ಇಲಾಖೆಯು ಹಾಸಿಗೆ ಹಾಗೂ ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ಕಡಿಮೆಯಾಗದಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮಕ್ಕಳ ಔಷಧಿಗಳಿಗೆ ಕೊರತೆ ಉಂಟಾಗಲೇಬಾರದು ಎಂದು ಸೂಚನೆ ನೀಡಿದರು.
ಯಾವುದೇ ಸ್ಥಳಗಳಲ್ಲಿ ಜನಜಂಗುಳಿ ಆಗದಂತೆ ನೋಡಿಕೊಳ್ಳುವುದು ಪೊಲೀಸರ ಜವಾಬ್ದಾರಿಯಾಗಿದೆ. ಮಾಸ್ಕ್​ ಹಾಗೂ ಸಾಮಾಜಿಕ ಅಂತರ ಕೂಡ ಕಡ್ಡಾಯವಾಗಿದೆ. ಮಾರ್ಕೆಟ್​ಗಳಲ್ಲಿ ಹೆಚ್ಚಿನ ಜನರು ಸೇರುವಂತಿಲ್ಲ. ಜನ ಜಂಗುಳಿಯಾಗದಂತೆ ನೋಡಿಕೊಳ್ಳಲು ಮಾರ್ಕೆಟ್​ಗಳ ವ್ಯಾಪ್ತಿಯನ್ನು ಹೆಚ್ಚಿಸಬೇಕು. ಹೋಂ ಕ್ವಾರಂಟೈನಿಗಳ ಮೇಳೆ ನಿಗಾ ಇಡಬೇಕು. ಬೂಸ್ಟರ್​ ಡೋಸ್​ಗಳ ವೇಗವನ್ನು ಹೆಚ್ಚಿಸಬೇಕು. ಎಲ್ಲಾ ಟಫ್​ ರೂಲ್ಸ್​ಗಳು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದರು.

home minister araga jnanendra pressmeet after cm meeting

ಇದನ್ನು ಓದಿ : Bombay High Court : ಕೊರೊನಾ ಲಸಿಕೆ ಪಡೆಯದವರಿಗೆ ತಾರತಮ್ಯ ಮಾಡುವಂತಿಲ್ಲ : ಬಾಂಬೆ ಹೈಕೋರ್ಟ್

ಇದನ್ನೂ ಓದಿ : Aadhaar for future Schemes: ಆಧಾರ್ ಮಾಹಿತಿ ಸಂಚಿಕೆಗೆ ಒಪ್ಪಿಗೆ ಪಡೆಯಲು ಮುಂದಾಗಲಿದೆ ಸರ್ಕಾರ

Comments are closed.