masks have been made mandatory : ಕೊರೊನಾ ಆತಂಕ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಮಾಸ್ಕ್​ ಕಡ್ಡಾಯ

ಬೆಂಗಳೂರು : masks have been made mandatory :ಕೊರೊನಾ ಸೋಂಕಿನ ಅಪಾಯ ಕಡಿಮೆಯಾಯ್ತು ಎಂದುಕೊಳ್ಳುವಷ್ಟರಲ್ಲಿ ಇದೀಗ ಮತ್ತೆ ರಾಜ್ಯದಲ್ಲಿ ಕೋವಿಡ್​ ಸೋಂಕಿನ ಅಪಾಯ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳದ ಆತಂಕ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮತ್ತೊಮ್ಮೆ ಮಾಸ್ಕ್​ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಕೋವಿಡ್​ ನಿಯಂತ್ರಣ ಸಭೆಯನ್ನು ನಡೆಸಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್​​ ರಾಜ್ಯದಲ್ಲಿ ಕೋವಿಡ್​ ಸೋಂಕಿನ ಬೆಳವಣಿಗೆಯ ಬಗ್ಗೆ ಚರ್ಚೆ ನಡೆಸಿದರು.


ಕೋವಿಡ್​ ನಿಯಂತ್ರಣ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್​, ಕೋವಿಡ್​ ಸೋಂಕನ್ನು ನಿಯಂತ್ರಿಸಲು ಕೈಗೊಳ್ಳಬಹುದಾದ ವಿವಿಧ ಕ್ರಮಗಳ ಬಗ್ಗೆ ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ. ಕೋವಿಡ್​ ಸೋಂಕು ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚುತ್ತಿದೆ.ಹೀಗಾಗಿ 60 ವರ್ಷ ಮೇಲ್ಪಟ್ಟವರು ಯಾರೇ ಇದ್ದರೂ ಸಹ ಕೂಡಲೇ ಬೂಸ್ಟರ್ ಡೋಸ್​ ಪಡೆದುಕೊಳ್ಳಿ. ಅಲ್ಲದೇ ಜನರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಇನ್ಮುಂದೆ ಮಾಸ್ಕ್​ ಧರಿಸುವುದು ಕಡ್ಡಾಯವಾಗಿರಲಿದೆ ಎಂದು ಮಾಹಿತಿ ನೀಡಿದರು.


ದೇಶದಲ್ಲಿ ದಿನದಿಂದ ಹೆಚ್ಚುತ್ತಿರುವ ಮಂಕ್ಸಿಪಾಕ್ಸ್​ ಸೋಂಕಿನ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ಇಂದು ನಡೆದ ಕೋವಿಡ್​ ನಿಯಂತ್ರಣ ಸಭೆಯಲ್ಲಿ ಮಂಕಿಪಾಕ್ಸ್​ ಸೋಂಕಿನ ಕುರಿತು ಚರ್ಚೆ ನಡೆಸಿದ್ದೇವೆ. ರಾಜ್ಯದಲ್ಲಿ ಈವರೆಗೆ ಒಂದೇ ಒಂದು ಮಂಕಿಪಾಕ್ಸ್​ ಪ್ರಕರಣಗಳು ವರದಿಯಾಗಿಲ್ಲ. ಕರ್ನಾಟಕದಲ್ಲಿ ಮಂಕಿಪಾಕ್ಸ್​ ಸೋಂಕು ಹೆಚ್ಚದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.


ನೆರೆಯ ರಾಜ್ಯ ಕೇರಳದಲ್ಲಿ ಮಂಕಿಪಾಕ್ಸ್​​ ಸೋಂಕು ವರದಿಯಾಗಿದೆ. ಹೀಗಾಗಿ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುಂಜಾಗ್ರತಾ ಕ್ರಮವನ್ನು ವಹಿಸಿದ್ದೇವೆ. ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಮಂಕಿಪಾಕ್ಸ್​ ಸೋಂಕು ವರದಿಯಾಗದಂತೆ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲದೇ ಮಳೆಗಾಲದಲ್ಲಿ ಕಂಡು ಬರುವ ಮಲೇರಿಯಾದಂತಹ ಕಾಯಿಲೆಗಳ ನಿಯಂತ್ರಣದ ಬಗ್ಗೆಯೂ ಈ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಕಲೆ ಹಾಕಿದ್ದೇನೆ ಎಂದು ಹೇಳಿದರು.

ಇದನ್ನು ಓದಿ : FREE TRAVEL IN BMTC : ಸಿಲಿಕಾನ್​ ಸಿಟಿ ಜನತೆಗೆ ಗುಡ್​​ನ್ಯೂಸ್​ : ಬಿಎಂಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಇದನ್ನೂ ಓದಿ : 2nd PUC Supplementary Examination : ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ

in the wake of covid surge masks have been made mandatory across the state says minister sudhakar

Comments are closed.