Corona Updates : ದೇಶದಲ್ಲಿಂದು 30,941 ಮಂದಿಗೆ ಕೊರೊನಾ, 350 ಬಲಿ ಪಡೆದ ಹೆಮ್ಮಾರಿ

ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್‌ ಸೋಂಕಿನ ಸಂಖ್ಯೆಯಲ್ಲಿ ಏರಿಕೆಯನ್ನು ಕಾಣುತ್ತಿದೆ. ಕಳೆದ 24ಗಂಟೆಗಳ ಅವಧಿಯಲ್ಲಿ 30,941 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 350 ಕೊರೊನಾ ವೈರಸ್‌ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಯನ್ನು ನೀಡಿದೆ.

ಭಾರತದಲ್ಲಿ ಕೋವಿಡ್ -19 ರ ಸಕ್ರಿಯ ಪ್ರಕರಣಗಳು 3,70,640 ಕ್ಕೆ ಇಳಿದಿದ್ದಿ, ದೇಶದಲ್ಲಿ ಇದುವರೆಗೆ 4,38,560 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಪ್ರಕಾರ, ಆಗಸ್ಟ್ 30 ರವರೆಗೆ ಕೋವಿಡ್ -19 ಗಾಗಿ 52,15,41,098 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 13,94,573 ಮಾದರಿಗಳನ್ನು ಸೋಮವಾರ ಪರೀಕ್ಷಿಸಲಾಗಿದೆ.

ದೇಶದಲ್ಲಿಯೇ ಅತೀ ಹೆಚ್ಚು ಕೊರೊನಾ ಸೋಂಕಿನ ಪ್ರಕರಣಗಳು ಕೇರಳದಲ್ಲಿ ದಾಖಲಾಗುತ್ತಿದೆ. ಅಲ್ಲದೇ ಸಕ್ರೀಯ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿಯೂ ಕೇರಳ ಮೊದಲನೇ ಸ್ಥಾನದಲ್ಲಿದೆ. ಉಳಿದಂತೆ ಮಹಾರಾಷ್ಟ್ರ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕ ಮೂರನೇ ಸ್ಥಾನದಲ್ಲಿದೆ.

ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕಠಿಣ ನಿಯಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಈಗಾಗಲೇ ಸೂಚನೆಯನ್ನು ನೀಡಿದೆ. ಅಲ್ಲದೇ ಕೇರಳದಲ್ಲಿ ಪಾಸಿಟಿವಿಟಿ ದರ ಹೆಚ್ಚಾಗಿರುವುದರಿಂದಾಗಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವ ಆತಂಕ ಎದುರಾಗಿದೆ.

ಇದನ್ನೂ ಓದಿ : ದೇವರನಾಡಲ್ಲಿ ನಿಲ್ಲದ ಕೊರೊನಾ ಆರ್ಭಟ : 24 ಗಂಟೆಯಲ್ಲಿ 29,836 ಮಂದಿಗೆ ಸೋಂಕು

ಇದನ್ನೂ ಓದಿ : Corona Updates : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್‌ ಲಾಕ್‌ಡೌನ್, ನೈಟ್‌ ಕರ್ಪ್ಯೂ ಜಾರಿ

(India Covid Live Udpates : 30,941 fresh Covid-19 cases, 350 deaths in 24 hours; active cases drop to 3,70,640 )

Comments are closed.