India Covid cases: ಭಾರತದಲ್ಲೂ ಹೆಚ್ಚುತ್ತಿದೆ ಕೋವಿಡ್ ಸೋಂಕು: 24 ಗಂಟೆಗಳಲ್ಲಿ 140 ಹೊಸ ಕೋವಿಡ್ ಪ್ರಕರಣ ದಾಖಲು

ನವದೆಹಲಿ: (India Covid cases) ಚೀನಾದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 140 ಹೊಸ ಕರೋನವೈರಸ್ ಸೋಂಕುಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳು 1,960 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಸದ್ಯ ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,81,921) ದಾಖಲಾಗಿದೆ.

ದೇಶದಲ್ಲಿ ಕೊರೊನಾ ಸಾವಿನ ಸಂಖ್ಯೆ 5,30,733 ರಷ್ಟಿದ್ದು, ಕಳೆದ 24 ಗಂಟೆಗಳಲ್ಲಿ ಮೇಘಾಲಯದಲ್ಲಿ ಒಂದು ಸಾವು ಮತ್ತು ಗುಜರಾತ್‌ನಲ್ಲಿ ಎರಡು ಸಾವುಗಳು ವರದಿಯಾಗಿರುವುದಾಗಿ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ ತಿಳಿದುಬಂದಿದೆ. ದೈನಂದಿನ ಪಾಸಿಟಿವಿಟಿ ದರ ಶೇ.0.10 ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ. 0.08 ರಷ್ಟಿದೆ.

ಸದ್ಯ ಒಟ್ಟು ಸೋಂಕುಗಳಲ್ಲಿ ಸಕ್ರಿಯ ಪ್ರಕರಣಗಳು 0.01 ಪ್ರತಿಶತದಷ್ಟಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು 98.81 ಪ್ರತಿಶತಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇನ್ನೂ ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,49,228 ಕ್ಕೆ ಏರಿದ್ದು, ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ಆರೋಗ್ಯ ಇಲಾಖೆಯ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.28 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ

ಇದನ್ನೂ ಓದಿ : Covid outbreak China : ಕೋವಿಡ್ ಮಹಾಸ್ಟೋಟಕ್ಕೆ ಚೀನಾ ತತ್ತರ : ಶೇ.80ರಷ್ಟು ಜನರಿಗೆ ಸೋಂಕು, ಚೀನಾ ವಿಜ್ಞಾನಿಗಳು ಬಿಚ್ಚಿಟ್ಟ ಸ್ಪೋಟ ಸತ್ಯ

ದಿನೇ ದಿನೇ ವಿದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾರತದಲ್ಲೂ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿವೆ. ಪ್ರತಿದಿನ ಹೊಸ ಪ್ರಕರಣಗಳು ದಾಖಲಾಗುತ್ತಿದ್ದು, ದೇಶದ ಜನತೆಯಲ್ಲಿ ಆತಂಕ ಹೆಚ್ಚಾಗುತ್ತಲೇ ಇದೆ ಹೊರತು ಕಡಿಮೆಯಾಗುತ್ತಿಲ್ಲ. ಇದೀಗ ಕಳೆದ ಒಂದು ದಿನದಲ್ಲೇ ಬರೋಬ್ಬರಿ ನೂರ ನಲವತ್ತು ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಮತ್ತಷ್ಟು ಆತಂಕ ಹೆಚ್ಚುತ್ತಿದೆ.

ಇದನ್ನೂ ಓದಿ : first covid Patient dies : ಕೋವಿಡ್ ಸೋಂಕಿಗೆ ಕರ್ನಾಟಕದಲ್ಲಿ ಈ ವರ್ಷದ ಮೊದಲ ಬಲಿ

ಇದನ್ನೂ ಓದಿ : Kerala Mask mandatory: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ : ಕೇರಳದಲ್ಲಿ ಜಾರಿಯಾಯ್ತು ಕಠಿಣ ಮಾರ್ಗಸೂಚಿ

India Covid cases: Covid infection is increasing in India too: 140 new Covid cases registered in 24 hours

Comments are closed.