ಸೋಮವಾರ, ಏಪ್ರಿಲ್ 28, 2025
HomeCorona UpdatesCorona Updates : ಭಾರತದಲ್ಲಿ 24 ಗಂಟೆಯಲ್ಲಿ31,382 ಮಂದಿಗೆ ಸೋಂಕು, 318 ಬಲಿ

Corona Updates : ಭಾರತದಲ್ಲಿ 24 ಗಂಟೆಯಲ್ಲಿ31,382 ಮಂದಿಗೆ ಸೋಂಕು, 318 ಬಲಿ

- Advertisement -

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ, ಕಳೆದ 24 ಗಂಟೆಯಲ್ಲಿ ಮತ್ತೆ 31,382 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 318 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 446368 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 300162 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 32542 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32848273 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಮನೆಯಲ್ಲಿಯೇ ಪಡೆಯಬಹುದು ಕೋವಿಡ್ ಲಸಿಕೆ : ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್ !

ನಿನ್ನೆ ದೇಶದಲ್ಲಿ 15,65,696 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 72,20,642 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 84,15,18,026 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಇದನ್ನೂ ಓದಿ: 14 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢ ! ಶುರುವಾಯ್ತಾ ಕೊರೊನಾ ಮೂರನೇ ಅಲೆ …!

(31,382 people infected with coronavirus in India)

RELATED ARTICLES

Most Popular