India Corona Updates : ಭಾರತದಲ್ಲಿ ಹೆಚ್ಚಿದ ಕೊರೊನಾ ಸೋಂಕು ಸಾವು, ಹೆಚ್ಚಳ : 24 ಗಂಟೆಯಲಿ 282 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 31,923 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಸೋಂಕಿನ ಜೊತೆಗೆ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 282 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 446050 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 301640 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 31990 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32815731 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಕೊನೆಗೂ ಮಣಿದ ಯುಕೆ : ಕೋವಿಶೀಲ್ಡ್‌ ಲಸಿಕೆ ಪಡೆದವರಿಗೆ ಗ್ರೀನ್‌ ಸಿಗ್ನಲ್

ನಿನ್ನೆ ದೇಶದಲ್ಲಿ 14,13,951 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 71,38,205 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 83,39,90,049 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಇದನ್ನೂ ಓದಿ: Good News : ಜಾನ್ಸನ್​ & ಜಾನ್ಸನ್​ ಸಿಂಗಲ್​ ಡೋಸ್​ ಕೊರೊನಾ ಲಸಿಕೆ ಭಾರತದಲ್ಲಿ ಲಭ್ಯ !

(Increased coronavirus deaths in India: 282 deaths in 24 hours)

Comments are closed.