ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 43,263 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,31,39,981ಕ್ಕೆ ಏರಿಕೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 338 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 441749 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 393614 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 40567 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32304618 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇದನ್ನೂ ಓದಿ: 2 ಅಲೆಗಿಂತ 7 ಪಟ್ಟು ಹೆಚ್ಚು ಮಕ್ಕಳನ್ನು ಕಾಡುತ್ತೆ ಕೊರೊನಾ 3ನೇ ಅಲೆ : ತಜ್ಞರ ವರದಿ ಆತಂಕ
ನಿನ್ನೆ ದೇಶದಲ್ಲಿ 18,17,639 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 86,51,701 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 71,65,97,428 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.
(Rapid rise in coronavirus deaths in India: 338 deaths in a single day)