Corona Vaccine : ಕೊರೊನಾ ಲಸಿಕೆ ವಿತರಣೆಯಲ್ಲಿ ದಾಖಲೆ ಬರೆದ ಭಾರತ : 67.72 ಕೋಟಿ ಡೋಸ್‌ ಲಸಿಕೆ ವಿತರಣೆ

ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 58.85 ಲಕ್ಷ ಡೋಸ್‌ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 67.72 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ 18 ರಿಂದ 44 ವರ್ಷದೊಳಗಿನ 8.89 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದರೆ, 4.62 ಕೋಟಿ ಮಂದಿ ಎರಡನೇ ಡೋಸ್ ಲಸಿಕೆ ಪಡೆದು ಕೊಂಡಿದ್ದಾರೆಂದು ತಿಳಿಸಿದೆ.

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,618 ಹೊಸ ಕೇಸ್ ಪತ್ತೆಯಾಗಿದ್ದು 330 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18 ರಿಂದ 45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 67,09,59,968 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ : SARS-COV-2 : ವಿದೇಶಿ ಪ್ರಯಾಣಿಕರಿಗೆ ಹೊಸ ರೂಲ್ಸ್‌ : ಆರೋಗ್ಯ ಇಲಾಖೆ

ಇದನ್ನೂ ಓದಿ : ಗೆಟ್‌ ಟು ಗೆದರ್‌ ಎಫೆಕ್ಟ್‌ ! ಒಂದೇ ಕಾಲೇಜಿನ 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು : ಕಾಲೇಜು ಸೀಲ್‌ ಡೌನ್‌

(India corona vaccine distribution New record)

Comments are closed.