Covid -19 Updates : ಭಾರತದಲ್ಲಿಂದು 26,041 ಹೊಸ ಕೋವಿಡ್‌ ಪ್ರಕರಣ, 276 ಮಂದಿ ಸಾವು

ನವದೆಹಲಿ : ದೇಶದಲ್ಲೀಗ ಕೊರೊನಾ ವೈರಸ್‌ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುತ್ತಿಲ್ಲ. ನಿತ್ಯವೂ ಸರಿ ಸುಮಾರು ಇಪತ್ತೈದು ಸಾವಿರಕ್ಕೂ ಅಧಿಕ ಕೋವಿಡ್‌ ಪ್ರಕರಣ ಗಳು ದಾಖಲಾಗುತ್ತಿದೆ. ಕಳೆದ ೨೪ ಗಂಟೆಗಳ ಅವಧಿಯಲ್ಲಿ 26,041 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, 276 ಮಂದಿ ಸಾವನ್ನಪ್ಪಿದ್ದಾರೆ.

ಕೋವಿಡ್‌ 19ವೈರಸ್‌ ಸೋಂಕಿನ ನಿಯಂತ್ರಣಕ್ಕೆ ಬಗ್ಗೆ ಕೇಂದ್ರ ಸರಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ ಸೋಂಕಿನ ಪ್ರಮಾಣ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುತ್ತಿಲ್ಲ. ದೇಶದಲ್ಲಿ 26ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುವ ಮೂಲಕ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,36,78,786ಕ್ಕೆ ಏರಿಕೆಯನ್ನು ಕಂಡಿದೆ. ಇನ್ನು 4,47,194 ಮಂದಿಯನ್ನು ಕೊರೊನಾ ಹೆಮ್ಮಾರಿ ಬಲಿ ಪಡೆದಿದೆ.

ಕೊರೊನಾ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದೇ ಇದ್ದರೂ ಕೂಡ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 29,621 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ 3,29,31,972 ಮಂದಿ ಹೆಮ್ಮಾರಿಯಿಂದ ಬಚಾವ್‌ ಆಗಿದ್ದಾರೆ. ಭಾರತದಲ್ಲೀಗ ಒಟ್ಟು 2,99,620 ಸಕ್ರೀಯ ಕೊರೊನಾ ಸೋಂಕಿನ ಪ್ರಕರಣಗಳಿವೆ.

ಭಾರತದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಕಳೆದ ಕೆಲವು ದಿನಗಳಿಂದಲೂ ನಿತ್ಯವೂ ಕೋಟಿಗೂ ಅಧಿಕ ಜನರಿಗೆ ಲಸಿಕೆಯನ್ನು ನೀಡಲಾಗುತ್ತಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ದೇಶದಲ್ಲಿ ಒಟ್ಟು 38,18,362 ಮಂದಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದ್ದು, ಇದುವರೆಗೆ ದೇಶದಲ್ಲಿರುವ 86,01,59,011 ಜನರು ವ್ಯಾಕ್ಸಿನ್‌ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : ಇನ್ಮುಂದೆ ಮನೆಯಲ್ಲಿಯೇ ಪಡೆಯಬಹುದು ಕೋವಿಡ್ ಲಸಿಕೆ : ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್ !

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಪಡೆದ ಭಾರತೀಯರಿಗೆ ಗುಡ್ ನ್ಯೂಸ್ ಕೊಟ್ಟ ಇಟಲಿ

(Covid -19 Updates : 26,041 new case, 276 death case found in India last 24 Hours )

Comments are closed.