new Covid-19 cases : ದೇಶದಲ್ಲಿ ಒಂದೇ ದಿನ 1.7 ಲಕ್ಷ ದೈನಂದಿನ ಕೋವಿಡ್​ ಪ್ರಕರಣ ವರದಿ

new Covid-19 cases : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,74,433 ಹೊಸ ದೈನಂದಿನ ಕೋವಿಡ್​ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವಾಲಯ ಮಾಹಿತಿ ನೀಡಿದೆ.ಬುಧವಾರಕ್ಕೆ ಹೋಲಿಕೆ ಮಾಡಿದರೆ ದೇಶದಲ್ಲಿ ದೈನಂದಿನ ಕೋವಿಡ್ ಸಂಖ್ಯೆಯಲ್ಲಿ 6.8 ಪ್ರತಿಶತ ಏರಿಕೆ ಕಂಡಿದೆ. ದೇಶದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 4,18,03,318ಕ್ಕೆ ಏರಿಕೆ ಕಂಡಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1008 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶಾದ್ಯಂತ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,98,983ಕ್ಕೆ ತಲುಪಿದೆ. 2020ರ ಮಾರ್ಚ್​ ತಿಂಗಳಲ್ಲಿ ದೇಶದಲ್ಲಿ ಮೊಟ್ಟ ಮೊದಲ ಕೋವಿಡ್​ ಸಾವು ಸಂಭವಿಸಿತ್ತು.


ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 87,682ಕ್ಕೆ ಇಳಿಕೆ ಕಂಡಿದ್ದಯ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆಯು 15,53,921 ಆಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


ದೇಶದಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ಅತೀ ಹೆಚ್ಚು ಕೋವಿಡ್​ ಪ್ರಕರಣಗಳನ್ನು ವರದಿ ಮಾಡಿದ ಐದು ರಾಜ್ಯಗಳ ಪೈಕಿ ಕೇರಳ 52,199 ಕೇಸುಗಳನ್ನು ವರದಿ ಮಾಡುವ ಮೂಲಕ ಮೊದಲ ಸ್ಥಾನವನ್ನು ಪಡೆದಿದೆ. ಎರಡನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ 20,505 ಕೋವಿಡ್​ ಪ್ರಕರಣಗಳು ವರದಿಯಾಗಿವೆ. ಮೂರನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 18,067 ಕೋವಿಡ್​ ಪ್ರಕರಣಗಳು ದಾಖಲಾಗಿವೆ, ತಮಿಳುನಾಡಿನಲ್ಲಿ 14,013 ಹಾಗೂ ಗುಜರಾತ್​ನಲ್ಲಿ 8934 ಕೋವಿಡ್​ ಪ್ರಕರಣಗಳು ವರದಿಯಾಗಿವೆ.


65.95 ಪ್ರತಿಶತ ಹೊಸ ಕೋವಿಡ್​ ಪ್ರಕರಣಗಳು ಈ ಐದು ರಾಜ್ಯಗಳಿಂದಲೇ ವರದಿಯಾಗಿವೆ. ಕೇರಳ ರಾಜ್ಯವೊಂದರಿಂದಲೇ 30.27 ಪ್ರತಿಶತ ದೈನಂದಿನ ಪ್ರಕರಣವು ವರದಿಯಾದಂತಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


ಇನ್ನು ದೇಶದಲ್ಲಿ ಕೋವಿಡ್​ ರಿಕವರಿ ದರವು 95.14 ಪ್ರತಿಶತವಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 2,59,107 ಮಂದಿ ಕೋವಿಡ್​ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್​ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು 3,97,70,414 ಕೋವಿಡ್​ ಸೋಂಕಿನಿಂದ ಗುಣಮುಖರಾದಂತಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,67,87,93,137 ಡೋಸ್​ ಕೊರೊನಾ ಲಸಿಕೆಗಳನ್ನು ನೀಡಲಾಗಿದೆ ಎಂದು ಐಸಿಎಂಆರ್​ ಮಾಹಿತಿ ನೀಡಿದೆ.

India records over 1.72 lakh new Covid-19 cases, 1,008 deaths in 24 hours

ಇದನ್ನು ಓದಿ : Garbage Cess : ನಿಮ್ಮ ಜೇಬಿಗೆ ಕತ್ತರಿ ಹಾಕಲಿದೆ ನಿಮ್ಮ ಮನೆ ಕಸ: ಬೆಂಗಳೂರಿನಲ್ಲಿ ಸದ್ಯದಲ್ಲೇ ಗಾರ್ಬೇಜ್ ಸೆಸ್

ಇದನ್ನೂ ಓದಿ : BBMP Renovation : ಬಿಬಿಎಂಪಿ ಚುನಾವಣೆಗೆ ಭರದ ಸಿದ್ಧತೆ: ಕಟ್ಟಡ ನವೀಕರಣಕ್ಕೆ ಪ್ಲ್ಯಾನ್ ಫೈನಲ್

Comments are closed.