ನವದೆಹಲಿ: (Intranasal covid vaccine) ಭಾರತ್ ಬಯೋಟೆಕ್ ಅಭಿವೃದ್ದಿಪಡಿಸಿದ ವಿಶ್ವದ ಮೊದಲ ಕೋವಿಡ್ ಇಂಟ್ರಾನಾಸಲ್ ಲಸಿಕೆಯನ್ನು ಗಣರಾಜ್ಯೋತ್ಸವದ ದಿನದಂದು ಅಧಿಕೃತವಾಗಿ ಪ್ರಾರಂಭಿಸುವುದಾಗಿ ಭಾರತ್ ಬಯೋಟೆಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲಾ ಅವರು ಹೇಳಿದ್ದಾರೆ.
ಮೌಲಾನಾ ಆಜಾದ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MANIT) ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲಾ, ” ಭಾರತ್ ಬಯೋಟೆಕ್ ಅಭಿವೃದ್ದಿಪಡಿಸಿದ ವಿಶ್ವದ ಮೊದಲ ಕೋವಿಡ್ ಇಂಟ್ರಾನಾಸಲ್ ಲಸಿಕೆಯನ್ನು ಜನವರಿ 26, ಗಣರಾಜ್ಯೋತ್ಸವದಂದು ಅಧಿಕೃತವಾಗಿ ಪ್ರಾರಂಭಿಸಲಾಗುವುದು” ಎಂದು ಹೇಳಿದ್ದಾರೆ.
ಇಂಟ್ರಾನಾಸಲ್ ಲಸಿಕೆಯ ದರ;
iNCOVACC ಅನ್ನು 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಆಗಿ ನೀಡಲಾಗುತ್ತದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಎಲ್ಲಾ ಸಂಗ್ರಹಣೆಗಳಿಗೆ, ಭಾರತ್ ಬಯೋಟೆಕ್‌ನಿಂದ ಪ್ರತಿ ಡೋಸ್‌ಗೆ 325 (ಜೊತೆಗೆ GST) ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಮತ್ತು ಲಸಿಕೆ ಕೇಂದ್ರಗಳಲ್ಲಿ ಪ್ರತಿ ಡೋಸ್‌ಗೆ 800 ರೂ. (ಜೊತೆಗೆ ಜಿಎಸ್‌ಟಿ) ಪಾವತಿಸಬೇಕಾಗುತ್ತದೆ.
ನೋಂದಣಿ ಹೇಗೆ?
ಲಸಿಕೆ ತಯಾರಕ ಭಾರತ್ ಬಯೋಟೆಕ್ ಪ್ರಕಾರ, ನೀವು CoWin ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ನಿಮ್ಮ ಇಂಟ್ರಾನಾಸಲ್ ಲಸಿಕೆ ಡೋಸ್‌ಗೆ ಅಪಾಯಿಂಟ್‌ಮೆಂಟ್ ಅನ್ನು ಪಡೆದುಕೊಳ್ಳಬಹುದು. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯೊಂದಿಗೆ ನೀವು ಲಾಗ್ ಇನ್ ಮಾಡಬೇಕಾಗುತ್ತದೆ ಮತ್ತು ನಿಮ್ಮ ಸಂಖ್ಯೆಗೆ ಕಳುಹಿಸಲಾದ OTP [ಒಂದು-ಬಾರಿ-ಪಾಸ್ವರ್ಡ್] ಅನ್ನು ನಮೂದಿಸಬೇಕು. ನಂತರ ನೀವು ಸ್ಲಾಟ್ ಅನ್ನು ಆಯ್ಕೆ ಮಾಡಿಕೊಳ್ಳುವುದರ ಮೂಲಕ ಇಂಟ್ರಾನಾಸಲ್ ಲಸಿಕೆಗೆ ನೊಂದಾವಣಿ ಮಾಡಿಕೊಳ್ಳಬಹುದು. 18 ವರ್ಷ ಮೇಲ್ಪಟ್ಟವರು ಈ ಇಂಟ್ರಾನಾಸಲ್ ಶಾಟ್ ಅನ್ನು ಆಯ್ಕೆ ಮಾಡಬಹುದು.
ಇದನ್ನೂ ಓದಿ : India Covid cases: ಭಾರತದಲ್ಲೂ ಹೆಚ್ಚುತ್ತಿದೆ ಕೋವಿಡ್ ಸೋಂಕು: 24 ಗಂಟೆಗಳಲ್ಲಿ 140 ಹೊಸ ಕೋವಿಡ್ ಪ್ರಕರಣ ದಾಖಲು
ಇದನ್ನೂ ಓದಿ : first covid Patient dies : ಕೋವಿಡ್ ಸೋಂಕಿಗೆ ಕರ್ನಾಟಕದಲ್ಲಿ ಈ ವರ್ಷದ ಮೊದಲ ಬಲಿ
Intranasal covid vaccine: World’s first covid nasal vaccine launched on Republic Day